ADVERTISEMENT

ರಾಜಕೀಯ ನಿವೃತ್ತಿ ಘೋಷಿಸಿದ್ದ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ಟಿಎಂಸಿಗೆ ಸೇರ್ಪಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಸೆಪ್ಟೆಂಬರ್ 2021, 10:44 IST
Last Updated 18 ಸೆಪ್ಟೆಂಬರ್ 2021, 10:44 IST
ಬಾಬುಲ್‌ ಸುಪ್ರಿಯೋ (ಎಡ) ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ತೃಣಮೂಲ ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್‌ ಬ್ಯಾನರ್ಜಿ (ಬಲ)
ಬಾಬುಲ್‌ ಸುಪ್ರಿಯೋ (ಎಡ) ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ತೃಣಮೂಲ ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್‌ ಬ್ಯಾನರ್ಜಿ (ಬಲ)   

ನವದೆಹಲಿ:ಕೆಲವು ದಿನಗಳ ಹಿಂದಷ್ಟೇರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದ ಕೇಂದ್ರದ ಮಾಜಿ ಸಚಿವ ಹಾಗೂಬಿಜೆಪಿ ಸಂಸದ ಬಾಬುಲ್‌ ಸುಪ್ರಿಯೋ ಅವರು ಇಂದು (ಶನಿವಾರ) ತೃಣಮೂಲ ಕಾಂಗ್ರೆಸ್‌ ಪಕ್ಷಕ್ಕೆ (ಟಿಎಂಸಿ) ಸೇರ್ಪಡೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಟಿಎಂಸಿಯ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಟೀಕಿಸುತ್ತಿದ್ದವರಲ್ಲಿ ಪ್ರಮುಖರಾಗಿದ್ದ ಬಾಬುಲ್‌, ಜುಲೈನಲ್ಲಿ ರಾಜಕೀಯ ನಿವೃತ್ತಿ ಘೋಷಿಸಿದ್ದರು ಮತ್ತು ಮುಂದೆ ಯಾವುದೇ ಪಕ್ಷವನ್ನು ಸೇರುವುದಿಲ್ಲ ಎಂದು ತಿಳಿಸಿದ್ದರು.‌

ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ 2014ರಿಂದಲೂಹಲವು ಖಾತೆಗಳನ್ನು ನಿರ್ವಹಿಸಿದ್ದ ಸುಪ್ರಿಯೋ ಅವರನ್ನು ಜುಲೈ ತಿಂಗಳ ಆರಂಭದಲ್ಲಿ ನಡೆದ ಕೇಂದ್ರ ಸಚಿವ ಸಂಪುಟದ ಪುನರ್‌ರಚನೆ ವೇಳೆ ಸಚಿವ ಸ್ಥಾನದಿಂದ ತೆಗೆದುಹಾಕಲಾಗಿತ್ತು.

ADVERTISEMENT

ಅದಾದ ಕೆಲವೇ ದಿನಗಳ ನಂತರ ಅವರು ರಾಜಕೀಯ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದರು.

ಸಚಿವ ಸ್ಥಾನ ಕಳೆದುಕೊಂಡಿರುವುದರ ಬಗ್ಗೆ ಬೇಸರಹೊಂದಿರುವುದಾಗಿ ಸ್ಪಷ್ಟಪಡಿಸಿದ್ದ ಸುಪ್ರಿಯೋ,ಪಶ್ಚಿಮ ಬಂಗಾಳದ ಬಿಜೆಪಿ ನಾಯಕತ್ವದೊಂದಿಗೆ ಭಿನ್ನಾಭಿಪ್ರಾಯಗಳಿರುವುದಾಗಿಯೂ ತಿಳಿಸಿದ್ದರು.ಆದಾಗ್ಯೂ ಅವರು ಸಂಸದ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.