ADVERTISEMENT

ಬಿಜೆಪಿ ಸಂಸದ ರಾಮ್‌ ಸ್ವರೂಪ್‌ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಪಿಟಿಐ
Published 17 ಮಾರ್ಚ್ 2021, 6:45 IST
Last Updated 17 ಮಾರ್ಚ್ 2021, 6:45 IST
ರಾಮ್‌ ಸ್ವರೂಪ್‌ ಶರ್ಮಾ
ರಾಮ್‌ ಸ್ವರೂಪ್‌ ಶರ್ಮಾ   

ಶಿಮ್ಲಾ: ಹಿಮಾಚಲ ಪ್ರದೇಶದ ಬಿಜೆಪಿ ಸಂಸದ ರಾಮ್‌ ಸ್ವರೂಪ್‌ ಶರ್ಮಾ (62) ಅವರ ಮೃತದೇಹವು ದೆಹಲಿಯಲ್ಲಿರುವ ಅವರ ಮನೆಯಲ್ಲಿ ಬುಧವಾರ ಪತ್ತೆಯಾಗಿದೆ.

ಶರ್ಮಾ ಅವರ ಮೃತದೇಹವು ಅವರದ್ಧೇ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆ ಕೋಣೆಯನ್ನು ಒಳಗಿನಿಂದ ಲಾಕ್‌ ಮಾಡಲಾಗಿತ್ತು. ಘಟನಾ ಸ್ಥಳದಿಂದ ಯಾವುದೇ ಮರಣ ಪತ್ರ ಸಿಕ್ಕಿಲ್ಲ. ಇದು ಆತ್ಮಹತ್ಯೆ ಪ್ರಕರಣವೇ ಎಂಬುದರ ಬಗ್ಗೆ ‍ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಕಳೆದ ಹಲವು ತಿಂಗಳಿನಿಂದ ರಾಮ್‌ ಶರ್ಮಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.

ADVERTISEMENT

‘ರಾಮ್‌ ಶರ್ಮಾ ಅವರು ತಮ್ಮ ಫೋನ್ ಕರೆಗೆ ಉತ್ತರಿಸುತ್ತಿರಲಿಲ್ಲ. ಈ ಬಗ್ಗೆ ಅವರ ಆಪ್ತ ಸಹಾಯಕ ನಮಗೆ ಈ ಬಗ್ಗೆ ಮಾಹಿತಿ ನೀಡಿದರು. ತಕ್ಷಣವೇ ಅವರ ಮನೆಗೆ ತೆರಳಿ ಬಾಗಿಲು ಮುರಿದು ಒಳಗೆ ಪ್ರವೇಶಿಸಿದಾಗ ಅವರ ದೇಹವು ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ’ ಅವರು ಮಾಹಿತಿ ನೀಡಿದರು.

ಮಂಡಿ ಜಿಲ್ಲೆಯ ಜಲ್ಪೆಹರ ಗ್ರಾಮದಲ್ಲಿ 1958ಜೂನ್‌ 10 ರಂದು ಜನಿಸಿದ್ದ ಇವರು, 2014 ಮತ್ತು 2019ರಲ್ಲಿ ಮಂಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.

ಇವರ ನಿಧನದ ಕಾರಣ ಬಿಜೆಪಿ ಸಂಸದೀಯ ಪಕ್ಷದ ಸಭೆಯನ್ನು ಮುಂದಕ್ಕೆ ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.