ನವದೆಹಲಿ: ‘ಒಂದು ದೇಶ, ಒಂದು ಚುನಾವಣೆ’ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿ ಸಭೆಯು ಮಂಗಳವಾರ ಸಂಸತ್ ಭವನದಲ್ಲಿ ನಡೆಯಿತು.
ಈ ಸಭೆಗೆ ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ಅವರು ‘ನ್ಯಾಷನಲ್ ಹೆರಾಲ್ಡ್‌ನ ಲೂಟಿ’ ಎಂದು ಕೆಂಪು ಅಕ್ಷರಗಳಲ್ಲಿ ಬರೆಯಲಾಗಿದ್ದ ಕಪ್ಪು ಬಣ್ಣದ ಬ್ಯಾಗ್ ಅನ್ನು ಬಗಲಿಗೆ ಹಾಕಿಕೊಂಡು ಬಂದಿದ್ದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ದೋಷಾರೋಪಪಟ್ಟಿ ಸಲ್ಲಿಸಿದೆ. ಆದರೆ, ಈ ಆರೋಪಗಳನ್ನು ತಳ್ಳಿಹಾಕಿರುವ ಕಾಂಗ್ರೆಸ್, ‘ಇದು ನಮ್ಮ ನಾಯಕರ ವಿರುದ್ಧ ಬಿಜೆಪಿ ಮಾಡುತ್ತಿರುವ ಸೇಡಿನ ರಾಜಕಾರಣ’ ಎಂದು ಪ್ರತ್ಯಾರೋಪ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.