ADVERTISEMENT

ಟಿಎಂಸಿ ಸೋಲಿಸಲು ಒಂದಾಗೋಣ: ಬಂಗಾಳದಲ್ಲಿ ಕಾಂಗ್ರೆಸ್‌ಗೆ ಕರೆ ನೀಡಿದ ಬಿಜೆಪಿ

ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಒಂದಾಗೋಣ ಎಂದು ಬಂಗಾಳದಲ್ಲಿ ಬಿಜೆಪಿ ಹೇಳಿದೆ.

ಪಿಟಿಐ
Published 9 ನವೆಂಬರ್ 2022, 5:38 IST
Last Updated 9 ನವೆಂಬರ್ 2022, 5:38 IST
   

ದುರ್ಗಾಪುರ: ಪಶ್ಚಿಮ ಬಂಗಾಳದಲ್ಲಿ ಮುಂದಿನ ವರ್ಷ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ನಾವೆಲ್ಲರೂ ಒಟ್ಟಾಗಬೇಕು ಎಂದು ಬಿಜೆಪಿ ಸಂಸದ ಸೌಮಿತ್ರ ಖಾನ್ ಹೇಳಿದ್ದಾರೆ.

ಎಡಪಕ್ಷಗಳು ಮತ್ತು ಕಾಂಗ್ರೆಸ್ ಅನ್ನು ಉದ್ದೇಶಿಸಿ ಬಿಜೆಪಿ ಸಂಸದರು ಈ ಹೇಳಿಕೆ ನೀಡಿದ್ದು, ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತನಾಡಿದ್ದಾರೆ.

ಆದರೆ ಖಾನ್ ಅವರ ಪ್ರಸ್ತಾವನೆಯನ್ನು ಕಾಂಗ್ರೆಸ್ ಮತ್ತು ಎಡಪಕ್ಷಗಳು ತಳ್ಳಿಹಾಕಿವೆ. ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಕಾಂಗ್ರೆಸ್ ಹೇಳಿದೆ.

ADVERTISEMENT

ಯಾವುದೇ ಬೂತ್ ಮಟ್ಟದ ಚುನಾವಣೆಯಲ್ಲಿ ಟಿಎಂಸಿ ವಿರುದ್ಧ ಸ್ಪರ್ಧಿಸುವವರಿಗೆ ಬಿಜೆಪಿ ಸದಾ ಬೆಂಬಲ ನೀಡಲಿದೆ ಎಂದು ಸಂಸದ ಖಾನ್ ಹೇಳಿದ್ದಾರೆ.

ಆದರೆ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಯಾವುದೇ ಸಾಧ್ಯತೆ ಇಲ್ಲ ಎಂದು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.