ADVERTISEMENT

ಅರ್ನಬ್‌ ಗೋಸ್ವಾಮಿ ಬಂಧನ ಖಂಡಿಸಿದ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ

ಏಜೆನ್ಸೀಸ್
Published 4 ನವೆಂಬರ್ 2020, 8:39 IST
Last Updated 4 ನವೆಂಬರ್ 2020, 8:39 IST
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ   

ನವದೆಹಲಿ: ರಿಪಬ್ಲಿಕ್‌ ಟಿವಿ ಪ್ರಧಾನ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರನ್ನು ಬಂಧಿಸಿರುವ ಮಹಾರಾಷ್ಟ್ರ ಪೊಲೀಸರ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಚಾರವಾಗಿ ಎಎನ್‌ಐ ಸುದ್ದಿಸಂಸ್ಥೆ ಜೊತೆ ಮಾತನಾಡಿರುವ ಅವರು, 'ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿಯನ್ನು ಬಂಧಿಸಿದ ರೀತಿ ಆಕ್ಷೇಪಾರ್ಹವಾಗಿದೆ. ಈ ಘಟನೆಯು ಕಾಂಗ್ರೆಸ್ ಪಕ್ಷ ಮತ್ತು ಮಹಾರಾಷ್ಟ್ರ ಸರ್ಕಾರದ ಮನಸ್ಥಿತಿಯನ್ನು ತೋರಿಸುತ್ತದೆ. ಇದು ಪ್ರಜಾಪ್ರಭುತ್ವ ಮತ್ತು ಪತ್ರಿಕೋದ್ಯಮದ ತತ್ವಗಳ ಮೇಲೆ ನಡೆದ ದೊಡ್ಡ ದಾಳಿಯಾಗಿದೆ' ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಂಟೀರಿಯರ್‌ ಡಿಸೈನರ್‌ ಅನ್ವಯ್‌ ನಾಯಕ್‌ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಸಿಐಡಿ ತಂಡವು ಬುಧವಾರ ವಶಕ್ಕೆ ಪಡೆದುಕೊಂಡಿದೆ.

ADVERTISEMENT

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.