ADVERTISEMENT

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬೀನ್‌ ಅವಿರೋಧ ಆಯ್ಕೆ

ಏಕೈಕ ಅಭ್ಯರ್ಥಿಯಾಗಿ ಹೊರಹೊಮ್ಮಿದ ನಬೀನ್‌ * ಅವಿರೋಧ ಆಯ್ಕೆ

ಪಿಟಿಐ
Published 19 ಜನವರಿ 2026, 15:58 IST
Last Updated 19 ಜನವರಿ 2026, 15:58 IST
<div class="paragraphs"><p>ನಿತಿನ್‌ ನಬೀನ್‌</p></div>

ನಿತಿನ್‌ ನಬೀನ್‌

   

ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಅಧ್ಯಕ್ಷ ನಿತಿನ್‌ ನಬೀನ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.

‘ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಸೋಮವಾರ ಮಧ್ಯಾಹ್ನ 2ರಿಂದ 4 ಗಂಟೆಯವರೆಗೆ ನಡೆಯಿತು. ನಿತಿನ್‌ ನಬೀನ್‌ ಏಕೈಕ ಅಭ್ಯರ್ಥಿಯಾಗಿ ಹೊರಹೊಮ್ಮಿದರು. ನಾಮಪತ್ರ ಹಿಂತೆಗೆದುಕೊಳ್ಳುವಿಕೆಯ ಅವಧಿ ಮುಗಿದ ಬೆನ್ನಲ್ಲೇ ಅಧ್ಯಕ್ಷ ಸ್ಥಾನಕ್ಕೆ ಒಂದು ಹೆಸರು ಮಾತ್ರ ಸೂಚಿತವಾಗಿದೆ’ ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಚುನಾವಣಾಧಿಕಾರಿ ಕೆ. ಲಕ್ಷ್ಮಣ್‌ ಪ್ರಕಟಣೆಯಲ್ಲಿ ಘೋಷಿಸಿದ್ದಾರೆ.

ADVERTISEMENT

ನಿತಿನ್‌ ಪರವಾಗಿ ಸಲ್ಲಿಕೆಯಾದ 37 ಸೆಟ್‌ ನಾಮಪತ್ರಗಳೂ ಕ್ರಮಬದ್ಧವಾಗಿದ್ದು, ಮಾನ್ಯ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್‌ ಮತ್ತು ನಿತಿನ್‌ ಗಡ್ಕರಿ ಸೇರಿದಂತೆ ಹಲವು ಹಿರಿಯ ಬಿಜೆಪಿ ನಾಯಕರು ನಿತಿನ್‌ ಅವರ ಉಮೇದುವಾರಿಕೆಯನ್ನು ಸೂಚಿಸಿದವರಲ್ಲಿ ಸೇರಿದ್ದಾರೆ.  

36 ರಾಜ್ಯಗಳ ಪೈಕಿ 30 ರಾಜ್ಯಗಳ ಪಕ್ಷದ ಅಧ್ಯಕ್ಷರ ಚುನಾವಣೆ ಬಳಿಕ ರಾಷ್ಟ್ರೀಯ ಅಧ್ಯಕ್ಷರ ಚುನಾವಣಾ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಅಂದರೆ, ಅಗತ್ಯವಿರುವ ಶೇ 50ಕ್ಕಿಂತಲೂ ಹೆಚ್ಚು ರಾಜ್ಯಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಅವರು ತಿಳಿಸಿದ್ದಾರೆ. 

ರಾಜ್ಯಗಳಿಂದ ಬಂದಿರುವ 36 ಸೆಟ್‌ಗಳಲ್ಲಿನ ಪ್ರತಿ ಸೆಟ್‌ನಲ್ಲಿ 20 ನಾಯಕರ ಸಹಿಯಿದೆ. ಇನ್ನೊಂದು ಸೆಟ್‌ನ ನಾಮ ನಿರ್ದೇಶನ ಪತ್ರಗಳಿಗೆ ಪ್ರಧಾನಿ ಸೇರಿದಂತೆ ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯರು ಮತ್ತು 37 ಸಂಸದರು ಸಹಿ ಹಾಕಿದ್ದಾರೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.