ADVERTISEMENT

ಇದೇ 24ಕ್ಕೆ ಗೋವಾಗೆ ಭೇಟಿ ನೀಡಲಿರುವ ಜೆ.ಪಿ ನಡ್ಡಾ

ಪಿಟಿಐ
Published 22 ಜುಲೈ 2021, 8:00 IST
Last Updated 22 ಜುಲೈ 2021, 8:00 IST
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ    

ಪಣಜಿ: ‘ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇದೇ 24 ಮತ್ತು 25 ರಂದು ಗೋವಾಗೆ ಭೇಟಿ ನೀಡಲಿದ್ದಾರೆ’ ಎಂದು ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು.

ವರದಿಗಾರರೊಂದಿಗೆ ಮಾತನಾಡಿದ ಅವರು, ‘ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡ್ಡಾ ಅವರು ಇಲ್ಲಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಪಕ್ಷದ ವಿವಿಧ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ’ ಎಂದು ತಿಳಿಸಿದರು.

ಜೆ.ಪಿ ನಡ್ಡಾ ಅವರು ಜುಲೈ 11 ರಂದು ಗೋವಾಕ್ಕೆ ಎರಡು ದಿನಗಳ ಪ್ರವಾಸ ಕೈಗೊಳ್ಳಬೇಕಾಗಿತ್ತು. ಆದರೆ ಕೆಲವೊಂದು ಕಾರಣಗಳಿಂದಾಗಿ ಭೇಟಿಯನ್ನು ಮುಂದೂಡಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.