ADVERTISEMENT

ವಿಧಾನಸಭೆ ಚುನಾವಣೆ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಇಂದು ತಮಿಳುನಾಡಿಗೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2021, 3:41 IST
Last Updated 26 ಮಾರ್ಚ್ 2021, 3:41 IST
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ   

ಚೆನ್ನೈ: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಹುರಿದುಂಬಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಇಂದು(ಮಾ. 26) ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ.

ನಡ್ಡಾ ಅವರು ತಿಟ್ಟಕುಡಿ ಮತ್ತು ತಿರುವಾಯುರಿನಲ್ಲಿ ಸಾರ್ವಜನಿಕ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಗೆ ಏಪ್ರಿಲ್‌ 6 ರಂದು ಚುನಾವಣೆ ನಡೆಯಲಿದೆ. ಮೇ 2 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಕಾಂಗ್ರೆಸ್‌-ಡಿಎಂಕೆ ಮತ್ತು ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟಗಳ ನಡುವೆ ನೇರ ಹಣಾಹಣಿ ಇದೆ.

ADVERTISEMENT

ಏಪ್ರಿಲ್‌ 6 ರಂದು ಕೇರಳ ವಿಧಾನಸಭೆಗೂಚುನಾವಣೆ ನಡೆಯಲಿರುವುದರಿಂದ, ನಡ್ಡಾ ಆ ರಾಜ್ಯಕ್ಕೂಭೇಟಿ ನೀಡಲಿದ್ದಾರೆ.ಕಣ್ಣೂರಿನಲ್ಲಿ ಪಕ್ಷದ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.