ನವದೆಹಲಿ (ಪಿಟಿಐ):ಜನರ ಪ್ರಾತಿನಿಧಿಕ ಕಾಯ್ದೆ ಅನ್ವಯ ಬಿಜೆಪಿ, ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ತಮ್ಮ ವಾರ್ಷಿಕ ದೇಣಿಗೆ ಸಂಗ್ರಹದ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದು, ಆಯೋಗವು ಮಂಗಳವಾರ ಈ ಮಾಹಿತಿಗಳನ್ನು ಪ್ರಕಟಿಸಿದೆ.
‘2021–22ನೇ ಸಾಲಿನ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಬಿಜೆಪಿಗೆ ₹ 614.53 ಕೋಟಿ ಮೊತ್ತದ ದೇಣಿಗೆ ಸಂಗ್ರಹವಾಗಿದೆ. ಇದು ವಿರೋಧ ಪಕ್ಷ ಕಾಂಗ್ರೆಸ್ಗಿಂತ ಆರು ಪಟ್ಟು ಹೆಚ್ಚಿನ ಮೊತ್ತವಾಗಿದೆ. ಕಾಂಗ್ರೆಸ್ಗೆ ₹95.46 ಕೋಟಿ ಸಂಗ್ರಹವಾಗಿದೆ’ ಎಂದು ಆಯೋಗ ಹೇಳಿದೆ.
‘ಪ್ರೂಡೆಂಟ್ ಎಲೆಕ್ಟ್ರೋರಲ್ ಟ್ರಸ್ಟ್ ಸೇರಿದಂತೆ ಹಲವು ಎಲೆಕ್ಟ್ರೋರಲ್ ಟ್ರಸ್ಟ್ ಸಂಸ್ಥೆಗಳು ಬಿಜೆಪಿಗೆ ಮುಖ್ಯ ದೇಣಿಗೆದಾರರಾಗಿದ್ದಾರೆ’ ಎಂದಿದೆ.
‘ತೃಣಮೂಲ ಕಾಂಗ್ರೆಸ್ಗೆ ₹43 ಲಕ್ಷ ಹಣವು ದೇಣಿಗೆ ರೂಪದಲ್ಲಿ ಸಂಗ್ರಹವಾಗಿದೆ. ಕೇರಳದಲ್ಲಿ ಅಧಿಕಾರ ನಡೆಸುತ್ತಿರುವ ಸಿಪಿಎಂ ಪಕ್ಷಕ್ಕೆ ₹10.05 ಕೋಟಿ ದೇಣಿಗೆ ಸಂಗ್ರಹವಾಗಿದೆ. ದೆಹಲಿ, ಪಂಜಾಬ್ನಲ್ಲಿ ಅಧಿಕಾರದಲ್ಲಿರುವ ಹಾಗೂ ಮೂರು ರಾಜ್ಯದಲ್ಲಿ ಮಾನ್ಯತೆ ಪಡೆದಿರುವ ಆಮ್ ಆದ್ಮಿ ಪಕ್ಷಕ್ಕೆ ₹44.54 ಕೋಟಿ ದೇಣಿಗೆ ಸಂಗ್ರಹವಾಗಿದೆ’ ಎಂದು ಅದು ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.