ADVERTISEMENT

ಅಸ್ಸಾಂನ ತಿವಾ ಸ್ವಾಯತ್ತ ಮಂಡಳಿ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಗೆಲುವು

ಪಿಟಿಐ
Published 20 ಡಿಸೆಂಬರ್ 2020, 11:11 IST
Last Updated 20 ಡಿಸೆಂಬರ್ 2020, 11:11 IST
ತಿವಾ ಸ್ವಾಯತ್ತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನಗಳಲ್ಲಿ ಜಯ ಸಾಧಿಸಿದೆ. ವಿಜೇತ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಗುವಾಹಟಿಯಲ್ಲಿ ಭಾನುವಾರ ಮತ ಎಣಿಕೆ ಕೇಂದ್ರದ ಮುಂದೆ ವಿಜಯೋತ್ಸವ ಆಚರಿಸಿದರು –ಪಿಟಿಐ ಚಿತ್ರ
ತಿವಾ ಸ್ವಾಯತ್ತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನಗಳಲ್ಲಿ ಜಯ ಸಾಧಿಸಿದೆ. ವಿಜೇತ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಗುವಾಹಟಿಯಲ್ಲಿ ಭಾನುವಾರ ಮತ ಎಣಿಕೆ ಕೇಂದ್ರದ ಮುಂದೆ ವಿಜಯೋತ್ಸವ ಆಚರಿಸಿದರು –ಪಿಟಿಐ ಚಿತ್ರ   

ಗುವಾಹಟಿ: ಅಸ್ಸಾಂನ ತಿವಾ ಸ್ವಾಯತ್ತ ಮಂಡಳಿಗೆ (ಟಿಎಸಿ) ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಭಾರಿ ಬಹುಮತದೊಂದಿಗೆ ಗೆಲುವು ಸಾಧಿಸಿದೆ.

ಮಂಡಳಿಯ ಒಟ್ಟು 36 ಸ್ಥಾನಗಳ ಪೈಕಿ ಬಿಜೆಪಿ 33 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಬಿಜೆಪಿಯ ಮೈತ್ರಿ ಪಕ್ಷ ಅಸ್ಸಾಂ ಗಣ ಪರಿಷತ್‌ ಎರಡು ಸ್ಥಾನ ಹಾಗೂ ವಿರೋಧ ಪಕ್ಷವಾದ ಕಾಂಗ್ರೆಸ್‌ 1 ಸ್ಥಾನದಲ್ಲಿ ಗೆಲುವು ಸಾಧಿಸಿದೆ.

ರಾಜ್ಯ ಚುನಾವಣಾ ಆಯೋಗ ಈ ಚುನಾವಣೆಯ ಫಲಿತಾಂಶವನ್ನು ಭಾನುವಾರ ಪ್ರಕಟಿಸಿದೆ.

ADVERTISEMENT

ಕಣದಲ್ಲಿ ಒಟ್ಟು 124 ಅಭ್ಯರ್ಥಿಗಳಿದ್ದರು. 3,08,409 ಮತದಾರರಿದ್ದು, ಡಿ.17ರಂದು ನಡೆದ ಮತದಾನ ಪ್ರಕ್ರಿಯೆಯಲ್ಲಿ ಶೇ 71ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು.

ಇತ್ತೀಚೆಗೆ ನಡೆದ ಬೋಡೊಲ್ಯಾಂಡ್‌ ಪ್ರಾದೇಶಿಕ ಮಂಡಳಿಗೆ ನಡೆದ ಚುನಾವಣೆಯಲ್ಲಿಯೂ ಬಿಜೆಪಿ ಭಾರಿ ಗೆಲುವು ಸಾಧಿಸಿದೆ. ಈಗ ತಿವಾ ಸ್ವಾಯತ್ತ ಮಂಡಳಿಯ ಚುನಾವಣೆಯಲ್ಲಿಯೂ ತನ್ನ ಗೆಲುವಿನ ಓಟವನ್ನು ಮುಂದುವರಿಸಿದೆ. ಮುಂದಿನ ವರ್ಷ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಗಳಲ್ಲಿನ ಗೆಲುವು ಬಿಜೆಪಿ ವಿಶ್ವಾಸವನ್ನು ಹೆಚ್ಚಿಸಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.