ADVERTISEMENT

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಫೆಬ್ರುವರಿ 2024, 5:55 IST
Last Updated 14 ಫೆಬ್ರುವರಿ 2024, 5:55 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ನವದೆಹಲಿ: ರಾಜ್ಯಸಭೆ ದ್ವೈವಾರ್ಷಿಕ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಇಂದು (ಬುಧವಾರ) ಬಿಡುಗಡೆ ಮಾಡಲಾಗಿದೆ.

ಮಧ್ಯಪ್ರದೇಶದಿಂದ ಕೇಂದ್ರ ಸಚಿವ ಎಲ್. ಮುರುಗನ್, ಉಮೇಶ್‌ನಾಥ್ ಮಹಾರಾಜ್, ಮಾಯಾ ನರೋಲಿಯಾ, ಬನ್ಸಿಲಾಲ್‌ ಗುರ್ಜರ್ ಹಾಗೂ ಒಡಿಶಾದಿಂದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ADVERTISEMENT

ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಸಾ ಭಾಂಡಗೆ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇದು ಸೇರಿದಂತೆ ಬಿಜೆಪಿ ರಾಜ್ಯಸಭೆ ಚುನಾವಣೆಗೆ ತನ್ನ 19 ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಘೋಷಣೆ ಮಾಡಿತ್ತು.

ಕೇಂದ್ರದ ಮಾಜಿ ಸಚಿವ ಆರ್‌.ಪಿ.ಎನ್. ಸಿಂಗ್, ಉತ್ತರಾಖಂಡ ಬಿಜೆಪಿ ಘಟಕದ ಅಧ್ಯಕ್ಷ ಮಹೇಂದ್ರ ಭಟ್ ಅವರ ಹೆಸರು ಅಭ್ಯರ್ಥಿಗಳ ಪಟ್ಟಿಯಲ್ಲಿ ಇದೆ.

ರಾಜ್ಯಸಭೆಯ ಹಾಲಿ ಸದಸ್ಯ ಸುಧಾಂಶು ತ್ರಿವೇದಿ ಅವರನ್ನು ಪಕ್ಷವು ಮತ್ತೆ ಕಣಕ್ಕೆ ಇಳಿಸುತ್ತಿದೆ. ರಾಜ್ಯಸಭೆಯ ಸದಸ್ಯತ್ವದ ಅವಧಿ ಪೂರ್ಣಗೊಳ್ಳುತ್ತಿರುವ ಕೇಂದ್ರ ಸಚಿವರಲ್ಲಿ ಯಾರೊಬ್ಬರ ಹೆಸರೂ ಪಟ್ಟಿಯಲ್ಲಿ ಇಲ್ಲ. ಇವರಲ್ಲಿ ಹೆಚ್ಚಿನವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ.

ಒಟ್ಟು 15 ರಾಜ್ಯಗಳ 56 ಸ್ಥಾನಗಳಿಗೆ ಫೆ.27ರಂದು ದ್ವೈವಾರ್ಷಿಕ ಚುನಾವಣೆ ನಡೆಯಲಿದೆ.

ಕರ್ನಾಟಕದಿಂದ ರಾಜ್ಯಸಭೆಗೆ ಚುನಾಯಿತರಾಗಿರುವ ಬಿಜೆಪಿಯ ರಾಜೀವ್‌ ಚಂದ್ರಶೇಖರ್‌, ಕಾಂಗ್ರೆಸ್‌ನ ಎಲ್‌.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್‌ ಹಾಗೂ ಸಯ್ಯದ್‌ ನಾಸಿರ್ ಹುಸೇನ್‌ ಅವರು ಏಪ್ರಿಲ್‌ 2ರಂದು ನಿವೃತ್ತರಾಗಲಿದ್ದಾರೆ. ಈ ಚುನಾವಣೆಯಲ್ಲಿ ರಾಜ್ಯ ವಿಧಾನಸಭೆಯ 224 ಶಾಸಕರು ಮತದಾರರಾಗಿದ್ದು, ವಿಧಾನಸಭೆಯ ಬಲಾಬಲದ ಆಧಾರದಲ್ಲಿ ಕಾಂಗ್ರೆಸ್‌ ಮೂರು ಹಾಗೂ ಬಿಜೆಪಿ ಒಂದು ಸ್ಥಾನ ಗೆಲ್ಲಬಹುದು.

ರಾಜೀವ್‌ ಚಂದ್ರಶೇಖರ್‌ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವವರು ಎನ್ನಲಾಗಿದೆ. ಬಿಜೆಪಿಯಲ್ಲಿ ರಾಜೀವ್ ಚಂದ್ರಶೇಖರ್, ವಿ. ಸೋಮಣ್ಣ ಸೇರಿದಂತೆ ಹಲವು ಆಕಾಂಕ್ಷಿಗಳಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.