ADVERTISEMENT

ಬಿಜೆಪಿ, ಆರ್‌ಎಸ್‌ಎಸ್ ಎಂದಿಗೂ ಎಸ್‌ಸಿ, ಎಸ್‌ಟಿ ಏಳಿಗೆ ಬಯಸಲ್ಲ: ರಾಹುಲ್ ಗಾಂಧಿ

ಏಜೆನ್ಸೀಸ್
Published 10 ಫೆಬ್ರುವರಿ 2020, 6:51 IST
Last Updated 10 ಫೆಬ್ರುವರಿ 2020, 6:51 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ:‘ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಿದ್ಧಾಂತಗಳು ಮೀಸಲಾತಿಗೆ ವಿರುದ್ಧವಾಗಿವೆ. ಅವು ಎಂದಿಗೂಎಸ್‌ಸಿ, ಎಸ್‌ಟಿ ಏಳಿಗೆ ಬಯಸಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು ‘ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಾಂಸ್ಥಿಕ ರಚನೆಯನ್ನು ಹಾಳು ಮಾಡುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅಥವಾಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರುಮೀಸಲಾತಿ ಕೊನೆಗೊಳಿಸುವ ಕುರಿತು ಏನೇ ಕನಸು ಕಂಡರೂ ನಾವದಕ್ಕೆ ಅವಕಾಶ ನೀಡುವುದಿಲ್ಲ ಎಂಬುದನ್ನು ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ದಲಿತರಿಗೆ ಹೇಳಬಯಸುತ್ತೇನೆ’ ಎಂದಿದ್ದಾರೆ.

ಸರ್ಕಾರಿ ನೌಕರರ ಬಡ್ತಿಯಲ್ಲಿ ಮೀಸಲಾತಿಯು ಮೂಲಭೂತ ಹಕ್ಕು ಅಲ್ಲ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರದ ವಿರುದ್ಧಪ್ರತಿಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿತ್ತು.ಬಡ್ತಿ ಮೀಸಲಾತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಪರಿಣಾಮಕಾರಿಯಾಗಿ ವಾದ ಮಂಡಿಸಿಲ್ಲ ಎಂದು ಕಾಂಗ್ರೆಸ್‌ ಆರೋಪಿಸಿತ್ತು.

ADVERTISEMENT

ಇನ್ನಷ್ಟು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.