
ತಿರುವನಂತಪುರ: ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಂಬಂಧಿಸಿದ ಜಾಹಿರಾತು ಫಲಕಗಳನ್ನು ಪಾದಚಾರಿ ರಸ್ತೆಗಳಲ್ಲಿ ಅಳವಡಿಸಿದ್ದ ಬಿಜೆಪಿಗೆ ತನ್ನದೇ ಆಡಳಿತವಿರುವ ತಿರುವನಂತಪುರ ನಗರ ಪಾಲಿಕೆಯು ದಂಡ ವಿಧಿಸಿ, ದೂರು ದಾಖಲಿಸಿದೆ.
ತಿರುವನಂತಪುರ ನಗರ ಪಾಲಿಕೆ ಕಾರ್ಯದರ್ಶಿ ನೀಡಿರುವ ದೂರಿನ ಆಧಾರದಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕರಮನ ಜಯನ್ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಕೇರಳ ಹೈಕೋರ್ಟ್‌ನ ಹಲವು ಆದೇಶಗಳು ಮತ್ತು ಸ್ಥಳೀಯ ಸಂಸ್ಥೆಯ ನಿರ್ದೇಶನಗಳನ್ನು ಉಲ್ಲಂಘಿಸಿ ಬಿಜೆಪಿ ಜಿಲ್ಲಾ ಘಟಕವು ಪಾದಚಾರಿ ರಸ್ತೆಗಳಲ್ಲಿ ಜಾಹಿರಾತು ಫಲಕಗಳನ್ನು ಅಳವಡಿಸಿದೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಇದರೊಂದಿಗೆ ನಗರ ಪಾಲಿಕೆಯು ₹19.7 ಲಕ್ಷ ದಂಡವನ್ನೂ ವಿಧಿಸಿದೆ. ‘ಫ್ಲೆಕ್ಸ್‌ಗಳನ್ನು ತೆರವುಗೊಳಿಸುವಂತೆ ಸೂಚಿಸಲಾಗಿತ್ತು. ತೆರವುಗೊಳಿಸದ ಕಾರಣ ದಂಡ ವಿಧಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.