ADVERTISEMENT

ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಬಿಜೆಪಿ ಮುಖಂಡನ ಗುಂಡಿಕ್ಕಿ ಕೊಂದ ಉಗ್ರರು

ಪಿಟಿಐ
Published 6 ಆಗಸ್ಟ್ 2020, 6:33 IST
Last Updated 6 ಆಗಸ್ಟ್ 2020, 6:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಬಿಜೆಪಿ ಮುಖಂಡ ಮತ್ತು ಸರಪಂಚ ಸಜಾದ್ ಅಹ್ಮದ್ ಖಂಡೆಯನ್ನು ಅವರ ಮನೆಯ ಬಳಿ ಗುರುವಾರ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆ ಪ್ರದೇಶವನ್ನು ಉಗ್ರರು ಸೂಕ್ಷ್ಮವಾಗಿ ಗಮನಿಸಿದಂತೆ ಕಂಡುಬರುತ್ತದೆ. ಶ್ರೀನಗರದಿಂದ 60 ಕಿ.ಮೀ ದೂರದಲ್ಲಿರುವ ಖಾಜಿಗುಂಡ್ ಪ್ರದೇಶದ ವೆಸ್ಸು ಎಂಬ ಸ್ಥಳದಿಂದ ಆತನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಖಂಡೆ ಅವರನ್ನು ಕೂಡಲೇ ಅನಂತ್‌ನಾಗ್ ಜಿಲ್ಲೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ADVERTISEMENT

ಕುಲ್ಗಾಂ ಜಿಲ್ಲೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದಪಂಚಾಯತ್ ಸದಸ್ಯ ಆರಿಫ್ ಅಹ್ಮದ್ ಖಾನ್ ಅವರಿಗೆ ಗುಂಡಿಕ್ಕಿದ 48 ಗಂಟೆಗಳ ನಂತರ ಈ ಘಟನೆ ನಡೆದಿದೆ. ಸದ್ಯ ಆರಿಫ್ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.