ADVERTISEMENT

ಲಸಿಕೆ ಮಾರಾಟ ಆರೋಪ: ಪಂಜಾಬ್ ಸರ್ಕಾರದ ವಿರುದ್ಧ ತನಿಖೆಗೆ ಬಿಜೆಪಿ ಆಗ್ರಹ

ಪಿಟಿಐ
Published 5 ಜೂನ್ 2021, 12:56 IST
Last Updated 5 ಜೂನ್ 2021, 12:56 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ (ಪಿಟಿಐ): ಪಂಜಾಬ್‌ನಲ್ಲಿ ಕಾಂಗ್ರೆಸ್‌ ಪಕ್ಷದ ನೇತೃತ್ವದ ಸರ್ಕಾರ ಕೋವಿಡ್‌ ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡಿ ಲಾಭ ಗಳಿಸಿದೆ ಎಂಬ ಆರೋಪವನ್ನು ಕುರಿತು ತನಿಖೆಗೆ ಬಿಜೆಪಿ ಒತ್ತಾಯಿಸಿದೆ.

ಅಮರೀಂದರ್ ಸಿಂಗ್ ನೇತೃತ್ವದ ಪಂಜಾಬ್‌ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿ ಅವರು, ‘ತಪ್ಪು ಎಸಗಿದವರಿಗೆ ಶಿಕ್ಷೆ ಆಗಬೇಕು‘ ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ಮುಖಂಡ ರಾಹುಲ್ ಗಾಂಧಿ ಅವರನ್ನೂ ತರಾಟೆಗೆ ತೆಗೆದುಕೊಂಡಿದ್ದು, ತಮ್ಮ ಪಕ್ಷದ ಸರ್ಕಾರವೇ ಲಸಿಕೆ ಮಾರಿಕೊಂಡು ಲಾಭಗಳಿಸುವಾಗ ಇವರು, ಲಸಿಕೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಪ್ರಶ್ನಿಸುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ADVERTISEMENT

ಖಾಸಗಿ ಆಸ್ಪತ್ರೆಗಳಿಂದ ರಾಜ್ಯ ಸರ್ಕಾರ ಹಣ ಪಡೆದ ಮಾರ್ಗ ಯಾವುದು ಎಂದು ಪ್ರಶ್ನಿಸಿದ್ದಾರೆ. ಪಂಜಾಬ್‌ನಲ್ಲಿ ಕೋವಿಶೀಲ್ಡ್ ಲಸಿಕೆಯನ್ನು ₹ 412ಕ್ಕೆ ಖರೀದಿಸಿ, ಖಾಸಗಿ ಆಸ್ಪತ್ರೆಗಳಿಗೆ ₹ 1000ಕ್ಕೆ ಮಾರಲಾಗಿದೆ. ಖಾಸಗಿ ಆಸ್ಪತ್ರೆಗಳನ್ನು ಇವುಗಳನ್ನು ಜನರಿಗೆ ₹ 1,520ರ ದರದಲ್ಲಿ ಮಾರಾಟ ಮಾಡುತ್ತಿವೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.