ADVERTISEMENT

ಬಿಜೆಪಿ ಉಪಾಧ್ಯಕ್ಷರಾಗಿ ರಮಣ್‌ ಸಿಂಗ್, ಶಿವರಾಜ್‌ ಸಿಂಗ್, ವಸುಂಧರಾ ರಾಜೇ ನೇಮಕ

​ಪ್ರಜಾವಾಣಿ ವಾರ್ತೆ
Published 11 ಜನವರಿ 2019, 3:44 IST
Last Updated 11 ಜನವರಿ 2019, 3:44 IST
   

ನವದೆಹಲಿ: ಮಾಜಿ ಮುಖ್ಯಮಂತ್ರಿಗಳಾದ ರಮಣ್‌ ಸಿಂಗ್, ಶಿವರಾಜ್‌ ಸಿಂಗ್ ಚೌಹಾಣ್‌ ಮತ್ತು ವಸುಂಧರಾ ರಾಜೇ ಅವರನ್ನುಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಛತ್ತೀಸ್‌ಗಡ, ಮಧ್ಯಪ್ರದೇಶ, ರಾಜಸ್ಥಾನ ರಾಜ್ಯಗಳಿಗೆ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಅನುಭವಿಸಿದೆ. ಪ್ರಸ್ತುತ ಈ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತವಿದೆ.

ಬಿಜೆಪಿಯ ಭದ್ರಕೋಟೆಯಾಗಿದ್ದ ಈ ರಾಜ್ಯಗಳಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ಈ ಮೂವರು ಮಾಜಿ ಮುಖ್ಯಮಂತ್ರಿಗಳು ವಿಫಲರಾಗಿದ್ದರು. ರಾಷ್ಟ್ರ ರಾಜಕಾರಣದಲ್ಲಿ ಕೆಲಸ ಮಾಡುವ ಸಲುವಾಗಿ ಇವರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.