ADVERTISEMENT

ಬಿಜೆಪಿಗೆ ಹೊಸ ಅಧ್ಯಕ್ಷ: ಅಮಿತ್‌ ಶಾ ಸ್ಥಾನಕ್ಕೆ ನಡ್ಡಾ ಆಯ್ಕೆ ಬಹುತೇಕ ಖಚಿತ

​ಪ್ರಜಾವಾಣಿ ವಾರ್ತೆ
Published 20 ಜನವರಿ 2020, 3:21 IST
Last Updated 20 ಜನವರಿ 2020, 3:21 IST
ಜೆ.ಪಿ. ನಡ್ಡಾ
ಜೆ.ಪಿ. ನಡ್ಡಾ   

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಲಿದ್ದು, ಜಗತ್‌ ಪ್ರಕಾಶ್‌ ನಡ್ಡಾ (ಜೆ.‍ಪಿ.ನಡ್ಡಾ)ಆಯ್ಕೆ ಬಹುತೇಕ ಖಚಿತವಾಗಿದೆಎಂದು ಮೂಲಗಳು ತಿಳಿಸಿವೆ.

ಅಧ್ಯಕ್ಷರ ಸ್ಥಾನಕ್ಕೆ ಯಾವುದೇ ಪೈಪೋಟಿ ಇಲ್ಲದಿರುವುದರಿಂದ ಸದ್ಯ ಪಕ್ಷದ ಕಾರ್ಯಾಧ್ಯಕ್ಷರಾಗಿರುವ ನಡ್ಡಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗುತ್ತದೆ ಎಂಬ ವಿಶ್ವಾಸವನ್ನು ಮೂಲಗಳು ವ್ಯಕ್ತಪಡಿಸಿವೆ.

ಕಳೆದ ವರ್ಷದ ಜುಲೈನಲ್ಲಿ ನಡ್ಡಾ ಅವರು ಪಕ್ಷದ ಕಾರ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಗೃಹ ಸಚಿವರಾಗಿರುವ ಅಮಿತ್‌ ಶಾ ಅಧ್ಯಕ್ಷರಾಗಿ ಮುಂದುವರಿದಿದ್ದರು. ಪಕ್ಷದ ಸಂಘಟನೆ ವಿಚಾರದಲ್ಲಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಅತ್ಯಂತ ನಂಬಿಕಸ್ಥ ನಾಯಕ ಜೆ.ಪಿ. ನಡ್ಡಾ ಆಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.