ADVERTISEMENT

ಪಂಚರಾಜ್ಯ ಚುನಾವಣೆಗೆ ಬಿಜೆಪಿ ₹252 ಕೋಟಿ ವೆಚ್ಚ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2021, 19:47 IST
Last Updated 11 ನವೆಂಬರ್ 2021, 19:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಈ ವರ್ಷದ ಆರಂಭದಲ್ಲಿ ನಡೆದ ಅಸ್ಸಾಂ, ಪುದುಚೇರಿ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಕೇರಳ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಯು ಒಟ್ಟು ₹252 ಕೋಟಿ ವೆಚ್ಚ ಮಾಡಿದೆ. ಈ ಮೊತ್ತದಲ್ಲಿ ಶೇ 60ರಷ್ಟನ್ನು ಪಶ್ಚಿಮ ಬಂಗಾಳ ಒಂದರಲ್ಲೇ ವೆಚ್ಚ ಮಾಡಿದೆ.

ಚುನಾವಣಾ ಆಯೋಗಕ್ಕೆ ಬಿಜೆಪಿಯು ಸಲ್ಲಿಸಿರುವ ಚುನಾವಣಾ ವೆಚ್ಚದ ವರದಿಯಲ್ಲಿ ಈ ಮಾಹಿತಿ ಇದೆ.ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ₹161 ಕೋಟಿ ವೆಚ್ಚ ಮಾಡಿದೆ. ತಮಿಳುನಾಡಿನಲ್ಲಿ ₹22.97 ಕೋಟಿ ವೆಚ್ಚ ಮಾಡಿದೆ. ಕೇರಳದಲ್ಲಿ ₹29.24, ಅಸ್ಸಾಂನಲ್ಲಿ ₹43.81 ಕೋಟಿ ಮತ್ತು ಪುದುಚೇರಿಯಲ್ಲಿ ₹4.79 ಕೋಟಿ ವೆಚ್ಚ ಮಾಡಿದೆ.

ಬಿಜೆಪಿಯು ಹೆಚ್ಚು ವೆಚ್ಚ ಮಾಡಿರುವ ರಾಜ್ಯಗಳಲ್ಲಿ ಸೋಲುಕಂಡಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಕೇರಳದಲ್ಲಿ ಎಲ್‌ಡಿಎಫ್‌ ಮತ್ತು ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ ಬಂದಿವೆ. ಕೇರಳ ಮತ್ತು ತಮಿಳಿನಾಡಿನಲ್ಲಿ ಹೆಚ್ಚು ವೆಚ್ಚ ಮಾಡಿದ್ದರೂ ಬಿಜೆಪಿ ಗೆಲುವಿನ ಹತ್ತಿರ ಬರಲು ಸಾಧ್ಯವಾಗಿಲ್ಲ. ಪಶ್ಚಿಮ ಬಂಗಾಳದಲ್ಲಿ ಅಧಿಕಾರವನ್ನು ಉಳಿಸಿಕೊಂಡ ಟಿಎಂಸಿಯು, ಈ ಚುನಾವಣೆಗೆ ₹154.28 ಕೋಟಿ ವೆಚ್ಚ ಮಾಡಿದ್ದಾಗಿ ಘೋಷಿಸಿಕೊಂಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.