ನವದೆಹಲಿ: ರಾಜಧಾನಿ ದೆಹಲಿಯಲ್ಲಿ 27 ವರ್ಷದ ಬಳಿಕ ಅಧಿಕಾರಕ್ಕೆ ಬಂದಿರುವ ಬಿಜೆಪಿ, 2025ರ ವಿಧಾನಸಭೆ ಚುನಾವಣೆಯಲ್ಲಿ ₹57.65 ಕೋಟಿ ವೆಚ್ಚ ಮಾಡಿತ್ತು.
10 ವರ್ಷ ಆಡಳಿತದ ಬಳಿಕ ಇದೇ ಚುನಾವಣೆಯಲ್ಲಿ ಅಧಿಕಾರವನ್ನು ಕಳೆದುಕೊಂಡಿದ್ದ ಆಮ್ ಆದ್ಮಿ ಪಕ್ಷವು (ಎಎಪಿ) ಒಟ್ಟು ₹14.51 ಕೋಟಿ ವೆಚ್ಚ ಮಾಡಿತ್ತು.
ಸತತ ಎರಡನೇ ಅವಧಿಯಲ್ಲಿಯೂ ಶೂನ್ಯ ಸಾಧನೆ ಮಾಡಿದ್ದ ಕಾಂಗ್ರೆಸ್ ಪಕ್ಷ ₹46.19 ಕೋಟಿ ವ್ಯಯಿಸಿದೆ. ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ವೆಚ್ಚದ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿವೆ ಎಂದು ವರದಿ ತಿಳಿಸಿದೆ.
ಒಟ್ಟು 70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿಯು 48 ಕ್ಷೇತ್ರಗಳಲ್ಲಿ ಜಯಗಳಿಸಿದ್ದರೆ, ಎಎಪಿಯು 22 ಕ್ಷೇತ್ರಗಳಲ್ಲಿ ಜಯಗಳಿಸಿತ್ತು.
ಆಯೋಗಕ್ಕೆ ಸಲ್ಲಿಸಿರುವ ವರದಿಗಳ ಪ್ರಕಾರ, ಚುನಾವಣೆಯ ಅವಧಿಯಲ್ಲಿ ಬಿಜೆಪಿ ಒಟ್ಟು ₹87.79 ಕೋಟಿ ದೇಣಿಗೆ ಸ್ವೀಕರಿಸಿದ್ದರೆ, ಎಎಪಿ ₹16.10 ಕೋಟಿ ದೇಣಿಗೆ ಸ್ವೀಕರಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.