ಅಗರ್ತಲಾ:ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷಮಾಣಿಕ್ ಸಾಹಾ ಅವರುತ್ರಿಪುರಾ ಮುಖ್ಯಮಂತ್ರಿಯಾಗಿ ಇಂದು (ಮೇ 15) ಪ್ರಮಾಣವಚನ ಸ್ವೀಕರಿಸಿದರು.
ರಾಜಧಾನಿ ಅಗರ್ತಲಾದಲ್ಲಿರುವ ರಾಜಭವನದಲ್ಲಿ ಸಮಾರಂಭ ನಡೆಯಿತು.
ಮುಖ್ಯಮಂತ್ರಿಯಾಗಿದ್ದಬಿಪ್ಲವ್ ಕುಮಾರ್ ದೇವ್ ಅವರು ಅಚ್ಚರಿಯ ಬೆಳವಣಿಗೆಯಲ್ಲಿ ತಮ್ಮ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದರು.
ದೇವ್ ಅವರ ಅಧಿಕೃತ ನಿವಾಸದಲ್ಲಿ ಶನಿವಾರ ಸಂಜೆ ನಡೆದ ತುರ್ತು ಸಭೆಯಲ್ಲಿ, 69 ವರ್ಷದ ಮಾಣಿಕ್ ಸಾಹಾ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.
ಸಾಹಾ 2016ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. 2020ರಲ್ಲಿ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕವಾಗಿದ್ದರು. ಈ ವರ್ಷ ಮಾರ್ಚ್‌ನಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.