ಅಗರ್ತಲಾ: ತ್ರಿಪುರಾದ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು(ಭಾನುವಾರ) ನಡೆಯುತ್ತಿದೆ.
ರಾಜ್ಯದ ಆಡಳಿತಾರೂಢ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವಿನ ರಾಜಕೀಯ ಸಂಘರ್ಷದ ನಡುವೆ ಈ ಚುನಾವಣೆಯ ಫಲಿತಾಂಶ ತೀವ್ರ ಮಹತ್ವ ಪಡೆದುಕೊಂಡಿದೆ.
ಮತ ಎಣಿಕೆ ಮುಕ್ತಾಯಗೊಂಡ ಎಲ್ಲ ವಾರ್ಡ್‌ಗಳಲ್ಲೂ ಬಿಜೆಪಿ ಜಯ ಸಾಧಿಸಿದೆ ಎಂದು ಮೂಲಗಳು ತಿಳಿಸಿವೆ.
2018ರಲ್ಲಿ ತ್ರಿಪುರಾದಲ್ಲಿ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಸ್ಪರ್ಧಿಸಿದ ಮೊದಲ ಸ್ಥಳೀಯ ಸಂಸ್ಥೆಗಳ ಚುನಾವಣೆ ಇದಾಗಿದೆ.
51 ವಾರ್ಡ್‌ಗಳು, 13 ಮುನ್ಸಿಪಲ್ ಕೌನ್ಸಿಲ್‌ಗಳು ಮತ್ತು ಆರು ನಗರ ಪಂಚಾಯತ್‌ಗಳನ್ನು ಹೊಂದಿರುವ ಎಎಂಸಿ(ಅಗರ್ತಲಾ ನಗರ ಪಾಲಿಕೆ) ಸೇರಿದಂತೆ ತ್ರಿಪುರಾದ ಸ್ಥಳೀಯ ಸಂಸ್ಥೆಗಳ ಒಟ್ಟು 334 ಸ್ಥಾನಗಳಿಗೆ ಮತದಾನ ನಡೆದಿದೆ.
ಈ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿಯು ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಎಎಂಸಿ ಮತ್ತು 19 ನಗರ ಸ್ಥಳೀಯ ಸಂಸ್ಥೆಗಳ334 ಸ್ಥಾನಗಳ ಪೈಕಿ 112 ಸ್ಥಾನಗಳಲ್ಲಿ ಬಿಜೆಪಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.