ನವದೆಹಲಿ: ‘ಆಪರೇಷನ್ ಸಿಂಧೂರ’ ಯಶಸ್ವಿಯಾಗಿರುವ ಕಾರಣಕ್ಕೆ ದೇಶದಾದ್ಯಂತ 11 ದಿನಗಳ ‘ತಿರಂಗಾ ಯಾತ್ರೆ’ಯನ್ನು ಹಮ್ಮಿಕೊಳ್ಳುವುದಾಗಿ ಬಿಜೆಪಿ ಘೋಷಿಸಿದೆ. ಯಾತ್ರೆಯು ಮೇ 13ರಿಂದ 23ರವರೆಗೆ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಾಯಕತ್ವ ಹಾಗೂ ದೇಶದ ಸಶಸ್ತ್ರ ಪಡೆಗಳ ಸಾಧನೆಯನ್ನು ಜನರಿಗೆ ತಲುಪಿಸುವ ಕಾರ್ಯಕ್ರಮದ ಭಾಗವಾಗಿ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಪಕ್ಷವು ಜನರನ್ನು ಒಗ್ಗೂಡಿಸಲು ಯೋಜಿಸುತ್ತಿದೆ. ಬಿಜೆಪಿಯ ಹಿರಿಯ ನಾಯಕರು, ಕೇಂದ್ರ ಸಚಿವರು ಹಾಗೂ ಕಾರ್ಯಕರ್ತರು ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.