ADVERTISEMENT

ಕೇಜ್ರಿವಾಲ್ ಚುನಾವಣಾ ಪ್ರಚಾರದಲ್ಲಿ ಭಾಗಿಯಾದಂತೆ ತಡೆಯಲು ಬಿಜೆಪಿ ಹುನ್ನಾರ: ಎಎಪಿ

ಪಿಟಿಐ
Published 13 ಜನವರಿ 2024, 9:41 IST
Last Updated 13 ಜನವರಿ 2024, 9:41 IST
<div class="paragraphs"><p>ಅರವಿಂದ ಕೇಜ್ರಿವಾಲ್</p></div>

ಅರವಿಂದ ಕೇಜ್ರಿವಾಲ್

   

(ಪಿಟಿಐ ಚಿತ್ರ)

ದೆಹಲಿ: ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಅಬಕಾರಿ ನೀತಿಯ ಹಗರಣದ ನಂಟಿರುವ ಹಣ ಅಕ್ರಮ ವರ್ಗಾಗಣೆ ಪ್ರಕರಣ ಸಂಬಂಧ ಜನವರಿ 18ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ.ಡಿ) ನಾಲ್ಕನೇ ಬಾರಿ ಸಮನ್ಸ್ ಜಾರಿಗೊಳಿಸಿದೆ.

ADVERTISEMENT

ಇದನ್ನು ಖಂಡಿಸಿರುವ ಆಮ್ ಆದ್ಮಿ ಪಕ್ಷ (ಎಎಪಿ), ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಕೇಜ್ರಿವಾಲ್ ಭಾಗಿಯಾಗದಂತೆ ತಡೆಯಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಆರೋಪಿಸಿದೆ.

ಇ.ಡಿ ಅನ್ನು ಬಿಜೆಪಿ ದುರ್ಬಳಕೆ ಮಾಡುತ್ತಿದೆ. ಇದು ರಾಜಕೀಯ ಪ್ರೇರಿತವಾಗಿದ್ದು, ಕೇಜ್ರಿವಾಲ್ ಅವರು ಗೋವಾ ಪ್ರವಾಸ ಕೈಗೊಳ್ಳುವ ಸಮಯದಲ್ಲೇ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪರಿಸರ ಖಾತೆ ಸಚಿವ ಗೋಪಾಲ್ ರಾಯ್ ಹೇಳಿದ್ದಾರೆ.

ಈ ಸಲ ಇ.ಡಿ ವಿಚಾರಣೆಗೆ ಕೇಜ್ರಿವಾಲ್ ಹಾಜರಾಗುವರೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕುರಿತು ಕಾನೂನು ಸಲಹೆಗಾರರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

2023ರ ನವೆಂಬರ್ 02, ಡಿಸೆಂಬರ್ 21 ಮತ್ತು ಈ ವರ್ಷಾರಂಭದಲ್ಲಿ ಜನವರಿ 3ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಆದರೆ ಮೂರು ಬಾರಿಯೂ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿರಲಿಲ್ಲ.

ಏತನ್ಮಧ್ಯೆ ಕೇಜ್ರಿವಾಲ್ ಅವರು ಜನವರಿ 19ರಿಂದ ಎರಡು ದಿನಗಳ ಗೋವಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಎಎಪಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.