ADVERTISEMENT

ಬಿಜೆಪಿ ಚುನಾವಣಾ ಅಸ್ತ್ರವಾಗಿ ಸಿಎಎ, ಎನ್‌ಆರ್‌ಸಿ ಬಳಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2022, 14:01 IST
Last Updated 9 ನವೆಂಬರ್ 2022, 14:01 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ಕೃಷ್ಣನಗರ (ಪಶ್ಚಿಮ ಬಂಗಾಳ): ಬಿಜೆಪಿಯು ಮುಂಬರುವ ಗುಜರಾತ್‌ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಮತ್ತುರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಬಗ್ಗೆ ಮಾತನಾಡುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಆರೋಪಿಸಿದ್ದಾರೆ.

ಪಕ್ಷದ ಕಾರ್ಯಕರ್ತರನ್ನುದ್ದೇಶಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಸಿಎಎ ಮತ್ತು ಎನ್‌ಆರ್‌ಸಿಯನ್ನು ಅನುಷ್ಠಾನಗೊಳಿಸಲು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಅವಕಾಶ ಮಾಡಿಕೊಡುವುದಿಲ್ಲ.

ಬಿಜೆಪಿಯು ಇತರ ರಾಜ್ಯಗಳ ತಮ್ಮ ಬೆಂಬಲಿಗರನ್ನು ಕರೆ ತಂದು ಪಶ್ಚಿಮ ಬಂಗಾಳದ ಮತದಾರರನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ. ಇದರಿಂದ ಕಾಯಂ ನಿವಾಸಿಗಳು ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಾರೆಂದು ಆರೋಪಿಸಿದ್ದಾರೆ.

ADVERTISEMENT

ದೇಶದ ರಾಜಕೀಯ ಪರಿಸ್ಥಿತಿ ಬದಲಾಗಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. 2019ರ ಚುನಾವಣೆಗಿಂತ ಈಗಿನ ಪರಿಸ್ಥಿತಿ ವಿಭಿನ್ನವಾಗಿದೆ ಎಂದು ಹೇಳಿದ್ದಾರೆ.

ಚುನಾವಣೆ ಸಮೀಪಿಸಿದಂತೆ ಬಿಜೆಪಿ ಸಿಎಎ ಮತ್ತು ಎನ್‌ಆರ್‌ಸಿ ಜಾರಿಗೊಳಿಸುವ ಬಗ್ಗೆ ಮಾತನಾಡುತ್ತದೆ. ಇನ್ನು ಒಂದೂವರೆ ವರ್ಷದಲ್ಲಿ ಗುಜರಾತ್ ವಿಧಾನಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆಗಳಿದ್ದು, ಈ ಬಗ್ಗೆ ಮತ್ತೆ ಚರ್ಚೆ ಉಲ್ಬಣಿಸುತ್ತದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.