ADVERTISEMENT

ಬಿಜೆಪಿ ನಾಯಕರ ಲಾಭಕ್ಕಾಗಿ ಎಲ್‌ಐಸಿ ಹಣ ಬಳಕೆ: ಮಮತಾ ಬ್ಯಾನರ್ಜಿ

ಪಿಟಿಐ
Published 2 ಫೆಬ್ರುವರಿ 2023, 10:12 IST
Last Updated 2 ಫೆಬ್ರುವರಿ 2023, 10:12 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ    

ಬರ್ಧಮಾನ್: ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಹೂಡಿಕೆ ಮಾಡಿರುವ ಸಾರ್ವಜನಿಕರ ಹಣವನ್ನು ಬಿಜೆಪಿ ಕೆಲವು ನಾಯಕರ ಲಾಭಕ್ಕಾಗಿ ಬಳಕೆ ಮಾಡಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಪೂರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಹಿಂಡನ್‌ಬರ್ಗ್ ವರದಿ ಬಳಿಕ ಅದಾನಿ ಸಮೂಹದ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ವಿಪಕ್ಷಗಳು ಸಂಸತ್ತಿನಲ್ಲಿ ಗದ್ದಲವೆಬ್ಬಿಸಿತ್ತು. ಬಳಿಕ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಲಾಯಿತು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ವಿರುದ್ಧವೂ ಮಮತಾ ಆಕ್ರೋಶ ವ್ಯಕ್ತಪಡಿಸಿದರು.

ಬಜೆಟ್ ಮಂಡನೆಯ ಬಳಿಕ ಷೇರು ಮಾರುಕಟ್ಟೆ ಭಾರಿ ಕುಸಿತವನ್ನು ಕಂಡಿದೆ. 2024ರ ಲೋಕಸಬೆ ಚುನಾವಣೆ ಗುರಿಯಾಸಿ ನಡೆಸಿದ ಸರ್ಕಾರದ ಘೋಷಣೆಗಳೆಲ್ಲ ಬರಿ ಸುಳ್ಳು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.