ADVERTISEMENT

ಚುನಾವಣಾ ಬಾಂಡ್‌ ಮತ್ತೆ ಜಾರಿಗೆ: ನಿರ್ಮಲಾ ಹೇಳಿಕೆಗೆ ಜೈರಾಮ್‌ ರಮೇಶ್‌ ತಿರುಗೇಟು

ಪಿಟಿಐ
Published 20 ಏಪ್ರಿಲ್ 2024, 12:30 IST
Last Updated 20 ಏಪ್ರಿಲ್ 2024, 12:30 IST
ಜೈರಾಮ್‌ ರಮೇಶ್‌
ಜೈರಾಮ್‌ ರಮೇಶ್‌   

ನವದೆಹಲಿ: ಲೋಕಸಭೆ ಚುನಾವಣೆ ಗೆದ್ದು ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ, ಚುನಾವಣಾ ಬಾಂಡ್‌ ಮರಳಿ ಜಾರಿಗೆ ತರಲಾಗುವುದು ಎಂಬ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನೀಡಿರುವ ಹೇಳಿಕೆ ವಿರುದ್ಧ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, 'ಪೇ ಪಿಎಂ' ಹಗರಣದ ಮೂಲಕ ಸಾರ್ವಜನಿಕರ ಸುಮಾರು ₹4 ಲಕ್ಷ ಕೋಟಿ ಹಣವನ್ನು ಬಿಜೆಪಿ ಲೂಟಿ ಮಾಡಿರುವುದು ನಮಗೆ ತಿಳಿದಿದೆ. ಈಗ ಮತ್ತೆ ಲೂಟಿ ಮುಂದುವರಿಸಲು ಬಿಜೆಪಿ ಬಯಸುತ್ತಿದೆ. ಚುನಾವಣಾ ಬಾಂಡ್‌ಗಳನ್ನು ಅಸಾಂವಿಧಾನಿಕ ಮತ್ತು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್‌ ಘೋಷಿಸಿದೆ. ಆದರೂ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಬಾಂಡ್‌ಗಳನ್ನು ಮರಳಿ ತರುವುದಾಗಿ ನಿರ್ಮಲಾ ಹೇಳಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲಾ ಪಾಲುದಾರರೊಂದಿಗೆ ಸಮಾಲೋಚಿಸಿ ಚುನಾವಣಾ ಬಾಂಡ್‌ಗಳನ್ನು ಮರಳಿ ತರಲು ಬಿಜೆಪಿ ಉದ್ದೇಶಿಸಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್‌ ‘ಹಿಂದೂಸ್ತಾನ್‌ ಟೈಮ್ಸ್‌‘ಗೆ ತಿಳಿಸಿದ್ದರು.

ADVERTISEMENT

ಚುನಾವಣಾ ಬಾಂಡ್‌ ರದ್ದುಗೊಳಿಸಿ ಸುಪ್ರೀಂ ಕೋರ್ಟ್‌ ಫೆಬ್ರುವರಿಯಲ್ಲಿ ತೀರ್ಪು ನೀಡಿತ್ತು. ಸುಪ್ರೀಂ ಕೋರ್ಟ್‌ನ ಆದೇಶದಂತೆ ಚುನಾವಣಾ ಬಾಂಡ್‌ ಪಡೆದವರ ಮಾಹಿತಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಂಚಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.