ADVERTISEMENT

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ: ಕೇಂದ್ರ ಸಚಿವ ರಾಮದಾಸ್‌ ಅಠವಳೆ

ಪಿಟಿಐ
Published 21 ಡಿಸೆಂಬರ್ 2020, 10:01 IST
Last Updated 21 ಡಿಸೆಂಬರ್ 2020, 10:01 IST
ರಾಮ್‌ದಾಸ್‌ ಆಠವಳೆ
ರಾಮ್‌ದಾಸ್‌ ಆಠವಳೆ   

ಪಣಜಿ: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು 200 ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ. ಈ ಮೂಲಕ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಸಚಿವ ರಾಮದಾಸ್‌ ಅಠವಳೆ ಅವರು ಸೋಮವಾರ ವಿಶ್ವಾಸ ವ್ಯಕ್ತಪಡಿಸಿದರು.

ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ಪಕ್ಷಕ್ಕೂ ನಾಲ್ಕೈದು ಸ್ಥಾನಗಳನ್ನು ನೀಡುವಂತೆ ಕೋರುತ್ತೇನೆ ಎಂದು ಅವರು ಹೇಳಿದರು. ರಾಮದಾಸ್‌ ಅವರ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಬಿಜೆಪಿಯ ಮಿತ್ರ ಪಕ್ಷವಾಗಿದೆ.

ಗೋವಾ ಮುಖ್ಯಮಂತ್ರಿ ಅವರನ್ನುರಾಮದಾಸ್ ಸೋಮವಾರ ಭೇಟಿಯಾದರು. ಬಳಿಕ ಮಾತನಾಡಿದ ಅವರು,‘ಇತ್ತೀಚಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದರು. ಅವರ ಭೇಟಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಕೆಲವೇ ದಿನಗಳು ಉಳಿದಿವೆ ಎಂಬುದನ್ನು ಸಾಬೀತು ಮಾಡುತ್ತದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.