ಜೈಪುರ: ಅಶೋಕ್ ಗೆಹಲೋತ್ ನೇತೃತ್ವದ ರಾಜಸ್ಥಾನ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಉರುಳಿಸುವುದಿಲ್ಲ. ಅದಾಗಿಯೇ ಪತನಗೊಳ್ಳಲಿದೆ ಎಂದು ಬಿಜೆಪಿಯ ರಾಜಸ್ಥಾನ ಘಟಕದ ಅಧ್ಯಕ್ಷ ಸತೀಶ್ ಪೂನಿಯಾ ಹೇಳಿದ್ದಾರೆ.
ಆಂತರಿಕ ಕಚ್ಚಾಟದ ಹೊರತಾಗಿಯೂ ಸರ್ಕಾರ ಅವಧಿ ಪೂರೈಸಿದ್ದೇ ಆದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಅನ್ನು ಅಧಿಕಾರದಿಂದ ಕಿತ್ತೊಗೆಯಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳಿಂದಾಗಿ ರಾಜಸ್ಥಾನದಲ್ಲಿ ಬಿಜೆಪಿ ಭಾರಿ ಬಹುಮತದೊಂದಿಗೆ ಸರ್ಕಾರವನ್ನು ರಚಿಸುವ ವಿಶ್ವಾಸವಿದೆ ಎಂದೂ ಅವರು ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಸ್ಥಾನ ಸರ್ಕಾರ ಪತನಕ್ಕೆ ಮುಂದಾಗಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಪೂನಿಯಾ, ರಾಜ್ಯದ ಯುವಕರು ಮತ್ತು ರೈತರು ಅಶೋಕ್ ಗೆಹಲೋತ್ ಸರ್ಕಾರದ ವಿರುದ್ಧ ಅಸಮಾಧಾನ ಹೊಂದಿದ್ದಾರೆ. ಬಿಜೆಪಿಯು ಸರ್ಕಾರ ಪತನಗೊಳಿಸಲು ಮುಂದಾಗುವುದಿಲ್ಲ. ಅದಾಗಿಯೇ ಆಂತರಿಕ ಕಚ್ಚಾಟಗಳಿಂದ ಪತನವಾಗಲಿದೆ. ಇಲ್ಲವಾದಲ್ಲಿ ಮುಂದಿನ ಚುನಾವಣೆಯಲ್ಲಿ ಮತದಾರರೇ ಕಾಂಗ್ರೆಸ್ ಅನ್ನು ಉಚ್ಚಾಟಿಸಲಿದ್ದಾರೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.