ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದಾಖಲೆ ಬಹುಮತದೊಂದಿಗೆ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಅಲ್ಲದೆ ಆಮ್ ಆದ್ಮಿ ಪಕ್ಷವು ಸ್ಪರ್ಧಾ ನಕ್ಷೆಯಲ್ಲೇ ಇಲ್ಲ ಎಂದಿರುವ ಅಮಿತ್ ಶಾ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಏರ್ಪಟ್ಟಿದೆ ಎಂದು ಹೇಳಿದರು.
ಇದನ್ನೂ ಓದಿ:ಮೊರ್ಬಿ ಸೇತುವೆ ದುರಂತ: 8 ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ
ಗುಜರಾತ್‌ನಲ್ಲಿ ಎಲ್ಲ ದಾಖಲೆಗಳನ್ನು ಮುರಿದು ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಅವರು ಹೇಳಿದರು.
ಗುಜರಾತ್ ವಿಧಾನಸಭೆ ಚುನಾವಣೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿ.8ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟಗೊಳ್ಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.