ADVERTISEMENT

ಕೇಜ್ರಿವಾಲ್ ಭಾಷಣಕ್ಕೆ ಅಡ್ಡಿ ಪಡಿಸಲು ಜೋರಾಗಿ ಕೆಮ್ಮಿದ ಬಿಜೆಪಿ ಕಾರ್ಯಕರ್ತರು

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2018, 3:18 IST
Last Updated 28 ಡಿಸೆಂಬರ್ 2018, 3:18 IST
   

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರಿ ಕಾರ್ಯಕ್ರಮವೊಂದನ್ನುದ್ದೇಶಿಸಿ ಮಾತನಾಡಲು ಆರಂಭಿಸಿದಾಗ ಬಿಜೆಪಿ ಕಾರ್ಯಕರ್ತರು ಜೋರಾಗಿ ಕೆಮ್ಮುತ್ತಾ ನಗೆಯಾಡಿ ಅಡ್ಡಿಪಡಿಸಿದ್ದಾರೆ.

ಗುರುವಾರ ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕೇಜ್ರಿವಾಲ್ ಭಾಷಣ ಆರಂಭಿಸಿದ ಕೂಡಲೇ ಬಿಜೆಪಿ ಕಾರ್ಯಕರ್ತರ ಗುಂಪೊಂದು ಮುಂದೆ ಬಂದು ನಿಂತು ಜೋರಾಗಿ ಕೆಮ್ಮಿದೆ. ಬಿಜೆಪಿ ಕಾರ್ಯಕರ್ತರ ವರ್ತನೆ ನೋಡಿ, ಶಾಂತರಾಗಿರಿ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಅಷ್ಟೊತ್ತಿಗೆ ಕಾರ್ಯಕ್ರಮದಲ್ಲಿ ಆಸೀನರಾಗಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ಕಾರ್ಯಕರ್ತರಲ್ಲಿ ಸುಮ್ಮನಿರಿ.ಇದು ಸರ್ಕಾರಿ ಕಾರ್ಯಕ್ರಮ ಎಂದಿದ್ದಾರೆ.
ಷನಲ್ ಮಿಷನ್ ಫಾರ್ ಕ್ಲೀನ್ ಗಂಗಾ ಮತ್ತು ದೆಹಲಿಜಲ ನಿಗಮವು ಯಮುನಾ ನದಿ ಸ್ವಚ್ಛಗೊಳಿಸುವುದಕ್ಕಾಗಿ ಜಂಟಿಯಾಗಿ ಹಮ್ಮಿಕೊಂಡಿದ್ದಕಾರ್ಯಕ್ರಮದಲ್ಲಿ ಕೇಜ್ರಿವಾಲ್‍ರನ್ನು ಬಿಜೆಪಿ ಕಾರ್ಯಕರ್ತರು ಈ ರೀತಿ ನಗೆಯಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.