ADVERTISEMENT

ಬಿಜೆಪಿಯ 'ಅಚ್ಛೇ ದಿನ್' ಕೇವಲ ಭಾಷಣಗಳಲ್ಲಿ ಮಾತ್ರ: ಮೋದಿಗೆ ಖರ್ಗೆ ತಿರುಗೇಟು

ಪಿಟಿಐ
Published 4 ಜನವರಿ 2024, 9:38 IST
Last Updated 4 ಜನವರಿ 2024, 9:38 IST
ನರೇಂದ್ರ ಮೋದಿ ಮತ್ತು ಮಲ್ಲಿಕಾರ್ಜುನ ಖರ್ಗೆ
ನರೇಂದ್ರ ಮೋದಿ ಮತ್ತು ಮಲ್ಲಿಕಾರ್ಜುನ ಖರ್ಗೆ    

ನವದೆಹಲಿ: ಬಿಜೆಪಿ ಹೇಳುವ 'ಅಚ್ಛೇ ದಿನ್' ಕೇವಲ ಭಾಷಣಗಳಲ್ಲಿ ಹಾಗೂ ಅವರ ನೀಡುವ ಸುಳ್ಳು ಜಾಹೀರಾತುಗಳಲ್ಲಿ ಮಾತ್ರ ಎಂದು ಖರ್ಗೆ ವ್ಯಂಗ್ಯವಾಡಿದ್ದಾರೆ.

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಇಳಿಕೆಯಾಗುತ್ತಿದೆ. ಆದರೆ, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಾತ್ರ ತೈಲ ಬೆಲೆಯನ್ನು ಕಡಿಮೆ ಮಾಡುತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಕಳೆದ 19 ತಿಂಗಳಲ್ಲಿ ತೈಲ ಬೆಲೆಯು ಶೇಕಡಾ 31ರಷ್ಟು ಕಡಿಮೆಯಾಗಿದೆ. ಆದರೂ ಕೇಂದ್ರ ಸರ್ಕಾರ ಇಂಧನ ಬೆಲೆಯಲ್ಲಿ ಯಾವುದೇ ಕಡಿತ ಮಾಡಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.

ADVERTISEMENT

ಮೋದಿ ಸರ್ಕಾರವು ಕೇವಲ ಜನರಿಂದ ಹಣ ಲೂಟಿ ಮಾಡುವ ಕೆಲಸದಲ್ಲಿ ತೊಡಗಿದೆ. ಅವರ (ಮೋದಿ) ಸಂಪುಟ ಸಚಿವರು ತೈಲ ಕಂಪನಿಗಳೊಂದಿಗೆ ಬೆಲೆ ಇಳಿಕೆ ಕುರಿತು ಯಾವುದೇ ಮಾತುಕತೆ ನಡೆಸಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ತೈಲ ಕಂಪನಿಗಳು ಪ್ರತಿ ಲೀಟರ್‌ ಪೆಟ್ರೋಲ್‌ ಮೇಲೆ ₹8ರಿಂದ ₹10 ಹಾಗೂ ಪ್ರತಿ ಲೀಟರ್‌ ಡೀಸೆಲ್‌ ಮೇಲೆ ₹3 ರಿಂದ ₹4 ರೂಪಾಯಿ ಲಾಭ ಗಳಿಸುತ್ತಿದೆ ಎಂದು ಖರ್ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.