ಪುಣೆ: ‘ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾಗಿದ್ದ ಏರ್ ಇಂಡಿಯಾ ವಿಮಾನದ ಬ್ಲ್ಯಾಕ್‌ಬಾಕ್ಸ್ ಅನ್ನು ವಿಮಾನ ಅಪಘಾತ ತನಿಖಾ ಸಂಸ್ಥೆಯು (ಎಎಐಬಿ) ಪರಿಶೀಲಿಸುತ್ತಿದೆ’ ಎಂದು ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ ನಾಯ್ಡು ಮಂಗಳವಾರ ತಿಳಿಸಿದ್ದಾರೆ.
ಬ್ಲ್ಯಾಕ್‌ಬಾಕ್ಸ್ ಅನ್ನು ವಿಶ್ಲೇಷಣೆಗಾಗಿ ವಿದೇಶಕ್ಕೆ ಕಳುಹಿಸಲಾಗುತ್ತದೆ ಎಂಬ ಊಹಾಪೋಹವನ್ನು ಅವರು ತಳ್ಳಿಹಾಕಿದ್ದಾರೆ.
‘ಬ್ಲ್ಯಾಕ್‌ಬಾಕ್ಸ್ ಭಾರತದಲ್ಲೇ ಇದೆ. ಎಎಐಬಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.