ಪುಣೆ: ಅತ್ಯಂತ ವಿರಳ ಹಾಗೂ ಹೆಚ್ಚು ಅಪಾಯಕಾರಿಯಾದ ಬ್ಲ್ಯಾಕ್ ಫಂಗಸ್ ಸೋಂಕು ದೇಶದ ವಿವಿಧ ಭಾಗಗಳಲ್ಲಿ ವರದಿಯಾಗುತ್ತಿದೆ.
ಕೋವಿಡ್‌ನಿಂದ ಚೇತರಿಸಿಕೊಂಡವರು ಅಥವಾ ಚೇತರಿಸಿಕೊಳ್ಳುತ್ತಿರುವವರಲ್ಲಿ ಈ ಸೋಂಕು ಪತ್ತೆಯಾಗುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ಹಾಗಾಗಿಯೇ ಮಹಾರಾಷ್ಟ್ರ ಸರ್ಕಾರವು ಸಾಮಾನ್ಯ ಚಿಕಿತ್ಸಾ ಮಾನದಂಡವನ್ನೂ ರೂಪಿಸಿದೆ.
ಪುಣೆ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಈವರೆಗೆ 270 ಪ್ರಕರಣಗಳು ದೃಢಪಟ್ಟಿವೆ.ಕೋವಿಡ್ ಕಾಣಿಸಿಕೊಂಡ ನಂತರದ ದಿನಗಳಲ್ಲಿ ಈ ಸೋಂಕಿನಿಂದಾಗಿ ಮಹಾರಾಷ್ಟ್ರದಲ್ಲಿ 52 ಮಂದಿ ಮೃತಪಟ್ಟಿದ್ದಾರೆ.
ಕೋವಿಡ್‌ಗಿಂತ ಮುಂಚೆಯೂ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಇದ್ದವು. ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ 4–5ಪ್ರಕರಣಗಳಷ್ಟೇ ವರದಿಯಾಗಿದ್ದವು ಎಂದು ಪುಣೆಯ ನೋಬಲ್ ಆಸ್ಪತ್ರೆಯ ಡಾ. ಅಭಿಷೇಕ್ ಘೋಷ್ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಸುಮಾರು 1,500 ಪ್ರಕರಣಗಳು ಪತ್ತೆಯಾಗಿವೆ ಎಂದು ಅಲ್ಲಿನ ಆರೋಗ್ಯ ಸಚಿವ ರಾಜೇಶ್ ಟೋಪೆ ಬುಧವಾರ ಹೇಳಿದ್ದರು. ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಗುಜರಾತ್‌ನಲ್ಲಿಯೂ ಕೆಲವು ಪ್ರಕರಣಗಳು ದೃಢಪಟ್ಟಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.