ನವದೆಹಲಿ:ಕಪ್ಪುಹಣ ಕಾಯ್ದೆಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕೈಗೆತ್ತಿಕೊಳ್ಳಲಿದೆ.
ಕಪ್ಪು ಹಣ ಹೊಂದಿರುವವರ ವಿರುದ್ಧ ಪ್ರಕರಣ ದಾಖಲಿಸುವುದು ಮತ್ತು ತನಿಖೆ ನಡೆಸುವ ಅವಕಾಶ ನೀಡುವ 2016ರ ಕಪ್ಪು ಹಣ ಕಾಯ್ದೆಯನ್ನು 2015ರ ಜುಲೈನಿಂದ ಅನ್ವಯವಾಗುವಂತೆ ಜಾರಿಗೆ ತರಲು ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ದೆಹಲಿ ಹೈಕೋರ್ಟ್ ತಡೆ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.