ADVERTISEMENT

ಜಮ್ಮು ವಾಯುಪಡೆ ವಿಮಾನ ನಿಲ್ದಾಣದಲ್ಲಿ ಸ್ಫೋಟ: ಬಾಂಬ್ ನಿಷ್ಕ್ರಿಯ ದಳ ದೌಡು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಜೂನ್ 2021, 3:30 IST
Last Updated 27 ಜೂನ್ 2021, 3:30 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಜಮ್ಮು ವಾಯುಪಡೆ ವಿಮಾನ ನಿಲ್ದಾಣದ ತಾಂತ್ರಿಕ ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ಎರಡು ಬಾರಿ ಸ್ಫೋಟದ ಸದ್ದು ಕೇಳಿಸಿದೆ.

ಶನಿವಾರ ತಡರಾತ್ರಿ ಸುಮಾರು 1.45ಕ್ಕೆ ಐದು ನಿಮಿಷಗಳ ಅಂತರದಲ್ಲಿ ಸ್ಫೋಟದ ಸದ್ದು ಕೇಳಿದ್ದು, ಒಂದು ಸ್ಫೋಟದಿಂದ ಕಟ್ಟಡವೊಂದರ ಮೇಲ್ಛಾವಣಿ ಕುಸಿದಿದ್ದರೆ, ಮತ್ತೊಂದರಿಂದ ಕಟ್ಟಡದ ನೆಲಭಾಗ ಹಾನಿಯಾಗಿದೆ.

ಸ್ಫೋಟದಿಂದ ಜೀವಹಾನಿ ಇಲ್ಲವೆ ಗಾಯಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ.

ADVERTISEMENT

ಸ್ಫೋಟ ಸಂಭವಿಸಿದ ಜಮ್ಮು ಏರ್ ಫೋರ್ಸ್ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು, ಭದ್ರತಾ ಪಡೆಗಳ ಮುಖ್ಯಸ್ಥರು ಮತ್ತು ಬಾಂಬ್ ನಿಷ್ಕ್ರಿಯ ದಳ ಹಾಗೂ ವಿಧಿವಿಜ್ಞಾನ ಇಲಾಖೆಯ ತಜ್ಞರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.