ADVERTISEMENT

ರೈಲು ತಡೆದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2019, 17:20 IST
Last Updated 16 ಫೆಬ್ರುವರಿ 2019, 17:20 IST

ಮುಂಬೈ:ಪುಲ್ವಾಮಾದಲ್ಲಿ ಸಿಆರ್‌ಪಿಎಫ್‌ ಯೋಧರ ಮೇಲೆ ನಡೆದ ಉಗ್ರರ ದಾಳಿ ಖಂಡಿಸಿ ಮಹಾರಾಷ್ಟ್ರದಲ್ಲಿ ಶನಿವಾರ ಪ್ರತಿಭಟನೆಗಳು ನಡೆದಿದ್ದು, ಪಾಲ್ಘರ್‌ ಜಿಲ್ಲೆಯ ನಾಲಸೋಪರ ರೈಲು ನಿಲ್ದಾಣದಲ್ಲಿ ರೈಲು ತಡೆ ನಡೆಸಲಾಯಿತು.

ಬೆಳಿಗ್ಗೆ 8.20ಕ್ಕೆ ರೈಲು ನಿಲ್ದಾಣಕ್ಕೆ ಬಂಧ ಪ್ರತಿಭಟನಾಕಾರರು ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ಪಾಕಿಸ್ತಾನದ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.

ಅಮಾನತು: ಪುಲ್ವಾಮಾ ಭಯೋತ್ಪಾದನಾ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಯೋಧರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ರಾಜಸ್ಥಾನದ ಪ್ರತಾಪಗಢ ಜಿಲ್ಲೆಯ ಸರ್ಕಾರಿ ಶಾಲಾ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.