ADVERTISEMENT

ಅರ್ನಬ್‌ ಗೋಸ್ವಾಮಿ ಬಂಧನ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ರೋಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ನವೆಂಬರ್ 2020, 6:46 IST
Last Updated 4 ನವೆಂಬರ್ 2020, 6:46 IST
ಕೇಂದ್ರ ಗೃಹ ಸಚಿವ ಅಮಿತ್‌ ಶಾ
ಕೇಂದ್ರ ಗೃಹ ಸಚಿವ ಅಮಿತ್‌ ಶಾ   

ನವದೆಹಲಿ: ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರನ್ನು ವಶಕ್ಕೆ ಪಡೆದಿರುವ ಮಹಾರಾಷ್ಟ್ರ ಪೊಲೀಸರ ಕ್ರಮದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹರಿಹಾಯ್ದಿದ್ದಾರೆ.

ಈ ವಿಚಾರವಾಗಿ ಬುಧವಾರ ಟ್ವೀಟ್‌ ಮಾಡಿರುವ ಅವರು, 'ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಮತ್ತೊಮ್ಮೆ ಪ್ರಜಾಪ್ರಭುತ್ವವನ್ನು ಅಣಕಿಸುವ ಕೆಲಸ ಮಾಡಿವೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ರಿಪಬ್ಲಿಕ್ ಟಿವಿ ಮತ್ತು ಅರ್ನಬ್ ಗೋಸ್ವಾಮಿ ವಿರುದ್ಧ ರಾಜ್ಯ ಸರ್ಕಾರ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿರುವುದು ವೈಯಕ್ತಿಕ ಸ್ವಾತಂತ್ರ್ಯ ಮತ್ತು ಪ್ರಜಾತಂತ್ರದ ನಾಲ್ಕನೇ ಆಧಾರಸ್ತಂಭದ ಮೇಲೆ ನಡೆದ ದಾಳಿಯಾಗಿದೆ' ಎಂದು ಅಮಿತ್‌ ಶಾ ಹೇಳಿದ್ದಾರೆ.

ADVERTISEMENT

'ಅರ್ನಬ್‌ ಅವರನ್ನು ವಶಕ್ಕೆ ಪಡೆದಿರುವ ಘಟನೆ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತದೆ. ಮುಕ್ತ ಮಾಧ್ಯಮಗಳ ಮೇಲಿನ ದಾಳಿಯನ್ನು ವಿರೋಧಿಸಬೇಕಿದೆ' ಎಂದು ಅಮಿತ್‌ ಶಾ ಟ್ವೀಟ್‌ ಮಾಡಿದ್ದಾರೆ.

ಇಂಟೀರಿಯರ್‌ ಡಿಸೈನರ್‌ ಅನ್ವಯ್‌ ನಾಯಕ್‌ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಸಿಐಡಿ ತಂಡವು ಬುಧವಾರ ವಶಕ್ಕೆ ಪಡೆದುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.