ADVERTISEMENT

ಲಸಿಕೆ ಕಾರ್ಯಕ್ರಮ: ಭಾರತಕ್ಕೆ ₹ 186 ಕೋಟಿ ನೆರವು– ಬ್ಲಿಂಕೆನ್‌ ಘೋಷಣೆ

ಪಿಟಿಐ
Published 28 ಜುಲೈ 2021, 19:31 IST
Last Updated 28 ಜುಲೈ 2021, 19:31 IST
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್‌ ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಬುಧವಾರ ಭೇಟಿ ಮಾಡಿ ಮಾತುಕತೆ ನಡೆಸಿದರು –ಪಿಟಿಐ ಚಿತ್ರ
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್‌ ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಬುಧವಾರ ಭೇಟಿ ಮಾಡಿ ಮಾತುಕತೆ ನಡೆಸಿದರು –ಪಿಟಿಐ ಚಿತ್ರ   

ನವದೆಹಲಿ: ಭಾರತದಲ್ಲಿ ಕೈಗೊಂಡಿರುವ ಕೋವಿಡ್‌ ಲಸಿಕೆ ಕಾರ್ಯಕ್ರಮಕ್ಕೆ ₹ 186 ಕೋಟಿ ನೆರವು ನೀಡುವುದಾಗಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್‌ ಬುಧವಾರ ಇಲ್ಲಿ ಘೋಷಿಸಿದರು.

ದ್ವಿಪಕ್ಷೀಯ ಸಂಬಂಧಗಳ ವೃದ್ಧಿ ಹಿನ್ನೆಲೆಯಲ್ಲಿ ಭಾರತಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಅವರು, ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಭೇಟಿ: ಬ್ಲಿಂಕೆನ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಹ ಭೇಟಿಯಾಗಿ, ಉಭಯ ದೇಶಗಳ ಬಾಂಧವ್ಯ ಬಲಪಡಿಸುವ ನಿಟ್ಟಿನಲ್ಲಿ ಹಲವು ವಿಷಯಗಳ ಕುರಿತು ಚರ್ಚಿಸಿದರು.

ADVERTISEMENT

‘ಪ್ರಜಾಪ್ರಭುತ್ವ, ಅಭಿವೃಕ್ತಿ ಸ್ವಾತಂತ್ರ್ಯದಂಥ ಮೌಲ್ಯಗಳ ರಕ್ಷಣೆಗೆ ಭಾರತ ಹಾಗೂ ಅಮೆರಿಕ ಬದ್ಧತೆ ಹೊಂದಿವೆ. ಅಮೆರಿಕದಲ್ಲಿರುವ ಭಾರತೀಯರು ಉಭಯ ದೇಶಗಳ ಬಾಂಧವ್ಯ ವೃದ್ಧಿಗೆ ನೀಡಿರುವ ಕೊಡುಗೆ ಅನನ್ಯ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.