
ಬಿಜೆಪಿ
ಮುಂಬೈ: ದೇಶದ ಶ್ರೀಮಂತ ಮಹಾನಗರ ಪಾಲಿಕೆ ಎಂದು ಖ್ಯಾತಿಯಾಗಿರುವ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC)ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮುನ್ನಡೆ ಕಾಯ್ದುಕೊಂಡಿದೆ.
ಮತ ಎಣಿಕೆ ಪ್ರಗತಿಯಲ್ಲಿದ್ದು ಈವರೆಗೆ (ಮ.3.30) ಬಿಎಂಸಿಯ 227 ಸ್ಥಾನಗಳ ಪೈಕಿ ಬಿಜೆಪಿ 129, ಕಾಂಗ್ರೆಸ್ 15, ಶಿವಸೇನಾ ಉದ್ಧವ್ ಠಾಕ್ರೆ ಬಣ 72, ಎನ್‌ಸಿಪಿ (ಅಜಿತ್) 02 ಹಾಗೂ ಇತರರು 09 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ತಾಂತ್ರಿಕ ಕಾರಣಗಳಿಂದ ಬಿಎಂಸಿಯ ಮತ ಎಣಿಕೆ ತಡವಾಗಿ ಆರಂಭವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದೇಶದ ಶ್ರೀಮಂತ ಮಹಾನಗರ ಪಾಲಿಕೆ ಹೊಂದಿರುವ ಮುಂಬೈ ಅನ್ನು ಗೆಲ್ಲಲು ಬಿಜೆಪಿ ನೇತೃತ್ವದ ಮಹಾಯುತಿ ಹಾಗೂ ಅನೇಕ ವರ್ಷಗಳ ಬಳಿಕ ಒಂದಾಗಿರುವ ಠಾಕ್ರೆ ಸಹೋದರರ ನಡುವೆ ತೀವ್ರ ಪೈಪೋಟಿ ಉಂಟಾಗಿದೆ.
₹74,400 ಕೋಟಿಗೂ ಅಧಿಕ ಮೊತ್ತದ ವಾರ್ಷಿಕ ಬಜೆಟ್ ಹೊಂದಿರುವ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC)ಗೆ, ಸದಸ್ಯರ ಅಧಿಕಾರ ಅವಧಿ ಮುಗಿದು 4 ವರ್ಷಗಳ ಬಳಿಕ ಚುನಾವಣೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.