ADVERTISEMENT

ಯಮುನಾ ನದಿಯಲ್ಲಿ ದೋಣಿ ದುರಂತ: ಮತ್ತೆ 3 ಶವ ಪತ್ತೆ, ಮೃತರ ಸಂಖ್ಯೆ 12ಕ್ಕೆ ಏರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಆಗಸ್ಟ್ 2022, 1:07 IST
Last Updated 14 ಆಗಸ್ಟ್ 2022, 1:07 IST
ಉತ್ತರಪ್ರದೇಶದ ಬಂದಾ ಪ್ರದೇಶದಲ್ಲಿನ ಯಮುನಾ ನದಿಯಲ್ಲಿ ದೋಣಿ ದುರಂತ ಸಂಭವಿಸಿದ ಸ್ಥಳದಲ್ಲಿ ನೆರೆದಿರುವ ಜನರು –ಪಿಟಿಐ ಚಿತ್ರ
ಉತ್ತರಪ್ರದೇಶದ ಬಂದಾ ಪ್ರದೇಶದಲ್ಲಿನ ಯಮುನಾ ನದಿಯಲ್ಲಿ ದೋಣಿ ದುರಂತ ಸಂಭವಿಸಿದ ಸ್ಥಳದಲ್ಲಿ ನೆರೆದಿರುವ ಜನರು –ಪಿಟಿಐ ಚಿತ್ರ   

ಬಂದಾ/ಫತೇಪುರ್:ಉತ್ತರಪ್ರದೇಶದ ಬಂದಾ ಜಿಲ್ಲೆಯ ಯಮುನಾ ನದಿಯಲ್ಲಿ ಗುರುವಾರ ಸಂಭವಿಸಿದ್ದ ದೋಣಿ ದುರಂತಕ್ಕೆ ಸಂಬಂಧಿಸಿದಂತೆ ಮತ್ತೆ ಮೂರು ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ದುರಂತದಲ್ಲಿ 10ಕ್ಕೂ ಹೆಚ್ಚು ಜನರು ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ.

ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಪೊಲೀಸ್ ತಂಡಗಳು ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಶನಿವಾರ ತಡರಾತ್ರಿ ಮೂರು ಮೃತದೇಹಗಳು ಪತ್ತೆಯಾಗಿದ್ದು, ಇದುವರೆಗೆ 12 ಮೃತದೇಹಗಳು ಪತ್ತೆಯಾಗಿವೆ. ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಕಾರ್ಯಾಚರಣೆಗೆ ತೊಂದರೆಯಾಗಿದೆ ಎಂದು ಬಂದಾ ಎಸ್ಪಿ ಅಭಿನಂದನ್ ತಿಳಿಸಿದ್ದಾರೆ.

ADVERTISEMENT

‘ಶವಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಘಟನೆ ನಡೆದ 15–20 ಕಿ.ಮೀದೂರದಲ್ಲಿ ಶವಗಳು ಪತ್ತೆಯಾಗಿವೆ’ ಎಂದು ಕೃಷ್ಣಾಪುರ ಪೊಲೀಸ್ ಠಾಣೆ ಠಾಣಾಧಿಕಾರಿ ಸಂಜಯ್ ತಿವಾರಿ ತಿಳಿಸಿದ್ದಾರೆ.

30ಕ್ಕೂ ಹೆಚ್ಚು ಜನರನ್ನು ಹೊತ್ತ ದೋಣಿಯು ಮಾರ್ಕಾದಿಂದ ಫತೇಪುರ್‌ ಜಿಲ್ಲೆಯ ಜರೌಲಿ ಘಾಟ್ ಕಡೆಗೆ ಸಾಗುತ್ತಿದ್ದಾಗ ಬಲವಾದ ಗಾಳಿಗೆ ಭಾರಿ ಅಲೆಗಳು ಎದ್ದು ದೋಣಿ ಮಗುಚಿತ್ತು. 13 ಮಂದಿ ಈಜಿ ದಡ ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.