ಪ್ರಾತಿನಿಧಿಕ ಚಿತ್ರ
ಮುಂಬೈ: ಸರ್ಕಾರಿ ಆಸ್ಪತ್ರೆಯ ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದ್ದು, ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇಲ್ಲಿನ ಲೋಕಮಾನ್ಯ ತಿಲಕ್ ಸಾರ್ವಜನಿಕ ಆಸ್ಪತ್ರೆಯ ಸ್ವಚ್ಚತಾ ಸಿಬ್ಬಂದಿ ಶೌಚಾಲಯದ ಕಸದ ಬುಟ್ಟಿಯಲ್ಲಿ ಶಿಶುವಿನ ಶವವನ್ನು ನೋಡಿ, ವೈದ್ಯರಿಗೆ ತಿಳಿಸಿದ್ದಾರೆ. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಅಪರಿಚಿತ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸ್ಪತ್ರೆಯಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದೂ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.