ಸಾಂದರ್ಭಿಕ ಚಿತ್ರ
ಬೈರಕ್‌ಪುರ (ಪಶ್ಚಿಮ ಬಂಗಾಳ): ಆರ್.ಜಿ.ಕರ್ ಮೆಡಿಕಲ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿಯ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಆಯಿವಿ ಪ್ರಸಾದ್ ಮೃತ ವಿದ್ಯಾರ್ಥಿನಿ.
ಈಕೆ ಕಮರ್‌ಹಾಟಿ ಇಎಸ್‌ಐ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ತನ್ನ ತಾಯಿಯ ಜೊತೆ ಆಸ್ಪತ್ರೆಯ ವಸತಿಗೃಹದಲ್ಲಿ ವಾಸವಾಗಿದ್ದರು. ಇಲ್ಲಿಯೇ ಮೃತದೇಹ ಸಿಕ್ಕಿದೆ.
ಕಮರ್‌ಹಾಟಿ ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.