ಸ್ಫೋಟ
ಪೆಲ್ಲಕುರು (ಆಂಧ್ರಪ್ರದೇಶ): ತಿರುಪತಿ ಜಿಲ್ಲೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಇಂದು (ಗುರುವಾರ) ತಿಳಿಸಿದ್ದಾರೆ.
ಘಟನೆಯಲ್ಲಿ ಐದು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಓರ್ವನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಂಎಸ್ ಅಗರವಾಲ್ ಕಂಪನಿಯಲ್ಲಿ ಬುಧವಾರ ರಾತ್ರಿ ಅವಘಡ ಸಂಭವಿಸಿದೆ ಎಂದು ತಿರುಪತಿ ಪೊಲೀಸ್ ವರಿಷ್ಠಾಧಿಕಾರಿ ಎಲ್. ಸುಬ್ಬಾ ರಾಯುಡು ಹೇಳಿದ್ದಾರೆ.
ಬಾಯ್ಲರ್ ಸ್ಫೋಟದ ಸಂಬಂಧ ತನಿಖೆಗೆ ಆದೇಶಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.