ಕಡಲೂರು (ತಮಿಳುನಾಡು): ಇಲ್ಲಿನ ರಾಸಾಯನಿಕ ಘಟಕವೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಅಮೋನಿಯಾ ಅನಿಲ ಸೋರಿಕೆಯಾಗಿದ್ದರಿಂದ ಮಹಿಳೆ ಸೇರಿದಂತೆ ನಾಲ್ವರು ಕಾರ್ಮಿಕರು ಗುರುವಾರ ಮೃತಪಟ್ಟಿದ್ದಾರೆ.
ದುರಂತದಲ್ಲಿ 10 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
‘ಮೃತರು ಬೆಂಕಿಗೆ ಆಹುತಿಯಾಗಿಲ್ಲ. ಅವರು ಉಸಿರುಕಟ್ಟುವಿಕೆಯಿಂದ ಸತ್ತಿದ್ದಾರೆ’ ಎಂದು ಕಡಲೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಸುದ್ದಿಗಾರರಿಗೆ ತಿಳಿಸಿದರು.
ಮೃತರ ಕುಟುಂಬದವರಿಗೆ ತಲಾ ₹ 3 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಘೋಷಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.