ಮುಂಬೈ: ₹60 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ಅವರು ಮುಂಬೈ ಪೊಲೀಸ್‌ನ ಆರ್ಥಿಕ ಅಪರಾಧಗಳ ಘಟಕದ (ಇಒಡಬ್ಲ್ಯೂ) ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಪ್ರಕರಣ ಸಂಬಂಧ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಸೇರಿದಂತೆ ಐವರನ್ನು ಸುಮಾರು ನಾಲ್ಕೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದೇ ಪ್ರಕರಣ ಸಂಬಂಧ ಸೆಪ್ಟೆಂಬರ್ 5ರಂದು ಮುಂಬೈ ಪೊಲೀಸರು ಶಿಲ್ಪಾ ಶೆಟ್ಟಿ–ರಾಜ್ ಕುಂದ್ರಾ ಅವರಿಗೆ ಲುಕ್ಔಟ್ ನೋಟಿಸ್ ನೀಡಿದ್ದರು.
ಶಿಲ್ಪಾ ಮತ್ತು ರಾಜ್ ದಂಪತಿ ಆಗಾಗ್ಗೆ ಅಂತರರಾಷ್ಟ್ರೀಯ ಪ್ರವಾಸ ಮಾಡುತ್ತಿದ್ದರಿಂದ ನಗರ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.
ಸಾಲ ಮತ್ತು ಹೂಡಿಕೆ ಒಪ್ಪಂದದಲ್ಲಿ ಉದ್ಯಮಿಯೊಬ್ಬರಿಗೆ ₹60 ಕೋಟಿ ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಜುಹು ಠಾಣೆಯಲ್ಲಿ ದಂಪತಿ ವಿರುದ್ಧ ಆಗಸ್ಟ್ 14ರಂದು ಪ್ರಕರಣ ದಾಖಲಾಗಿತ್ತು.
ವ್ಯಕ್ತಿಯು ದೇಶದಿಂದ ಹೊರಹೋಗುವುದನ್ನು ತಡೆಯಲು ಅಥವಾ ಅವರ ಚಲನವಲನಗಳನ್ನು ಪತ್ತೆಹಚ್ಚಲು ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.