ADVERTISEMENT

ಬಿಹಾರ: ಪಟ್ನಾದ ಮನೆಯಲ್ಲಿ ಸ್ಫೋಟ, ಐವರಿಗೆ ಗಾಯ

ಏಜೆನ್ಸೀಸ್
Published 10 ಫೆಬ್ರುವರಿ 2020, 5:34 IST
Last Updated 10 ಫೆಬ್ರುವರಿ 2020, 5:34 IST
   

ಪಟ್ನಾ:ಬಿಹಾರ ರಾಜಧಾನಿಯ ಗಾಂಧಿ ಮೈದಾನದ ಬಳಿ ಮನೆಯೊಂದರಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಸ್ಫೋಟದಲ್ಲಿ ಐದು ಜನ ಗಾಯಗೊಂಡಿದ್ದಾರೆ.

‘ಮನೆಯಲ್ಲಿಟ್ಟಿದ್ದ ಬಾಂಬ್ ಸ್ಫೋಟಗೊಂಡಿರುವ ಅನುಮಾನವಿದ್ದು, ಎರಡು ಮನೆಗಳಿಗೆ ಹಾನಿಯಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ, ಅಧಿಕಾರಿಗಳು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದೆ. ಘಟನೆಯಿಂದಾಗಿ ಸುತ್ತಲಿನ ಪ್ರದೇಶಗಳಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.