ಶ್ರೀನಗರ: ಜಮ್ಮು–ಕಾಶ್ಮೀರದ ಸೋಪೋರೆಯಲ್ಲಿ ಮಂಗಳವಾರ ಬುರ್ಖಾಧಾರಿ ಮಹಿಳೆ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಬಂಕರ್ ಮೇಲೆ ಬಾಂಬ್ ಎಸೆದು ಪರಾರಿಯಾಗಿದ್ದಾಳೆ ಎಂದು ವರದಿಯಾಗಿದೆ.
ಮಹಿಳೆ ಬಾಂಬ್ ಎಸೆದಿದ್ದಾರೆ ಎನ್ನಲಾದ ಸಿಸಿಟಿವಿ ದೃಶ್ಯಾವಳಿಯೊಂದನ್ನು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
‘ಸೋಪೋರೆಯಲ್ಲಿ ಸಿಆರ್‌ಪಿಎಫ್ ಬಂಕರ್ ಮೇಲೆ ಬಾಂಬ್ ಎಸೆದ ಮಹಿಳೆ ಯಾರು ಎಂಬುದನ್ನು ಕಂಡುಹಿಡಿಯಲಾಗಿದೆ. ಆಕೆಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು’ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.