ADVERTISEMENT

ರಾಜಸ್ಥಾನದ ಅಲ್ವಾರ್‌ನಲ್ಲಿ ಬಾಂಬ್‌ ರೀತಿಯ ವಸ್ತು ಪತ್ತೆ: ಮುಂದುವರಿದ ಪರಿಶೀಲನೆ

ಪಿಟಿಐ
Published 12 ಜನವರಿ 2026, 10:25 IST
Last Updated 12 ಜನವರಿ 2026, 10:25 IST
<div class="paragraphs"><p>(ಚಿತ್ರ ಕೃಪೆ–X/ @AadiVagabond)</p></div>

(ಚಿತ್ರ ಕೃಪೆ–X/ @AadiVagabond)

   

ಜೈಪುರ: ರಾಜಸ್ಥಾನದ ಅಲ್ವಾರ್ ನಗರದ ಮನೆಯೊಂದರ ಬಳಿ ಇಂದು (ಸೋಮವಾರ) ಬೆಳಿಗ್ಗೆ ಟೈಮರ್ ಅಳವಡಿಸಲಾದ ಬಾಂಬ್ ರೀತಿಯ ವಸ್ತು ಪತ್ತೆಯಾಗಿದ್ದು, ಆ ಪ್ರದೇಶದಲ್ಲಿ ಆತಂಕ ವಾತಾವರಣ ಸೃಷ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಪುರದ ಭಯೋತ್ಪಾದನಾ ನಿಗ್ರಹ ದಳ ಮತ್ತು ಬಾಂಬ್ ನಿಷ್ಕ್ರಿಯ ದಳದ ತಂಡಗಳು ಈ ಅನುಮಾನಾಸ್ಪದ ವಸ್ತುವನ್ನು ಪರಿಶೀಲಿಸಲಿವೆ ಎಂದು ಅವರು ಹೇಳಿದ್ದಾರೆ.

ADVERTISEMENT

ಅರಾವಳಿ ವಿಹಾರ್ ಪ್ರದೇಶದ ವಿವೇಕಾನಂದ ನಗರ ಸೆಕ್ಟರ್-4ರಲ್ಲಿ ಈ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ. ಮಾಹಿತಿ ಪಡೆದ ಪೊಲೀಸರು ಆ ಪ್ರದೇಶವನ್ನು ಸುತ್ತುವರಿದಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಅದನ್ನು ನಗರದಿಂದ ಸುಮಾರು ಆರೂವರೆ ಕಿಲೋಮೀಟರ್ ದೂರದಲ್ಲಿರುವ ಜೈಸಮಂದ್ ಅಣೆಕಟ್ಟೆ ಬಳಿಯ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಣೆಕಟ್ಟೆಯ ಸುತ್ತಮುತ್ತಲಿನ ಪ್ರದೇಶವನ್ನು ಸೀಲ್ ಮಾಡಲಾಗಿದೆ. ಜತೆಗೆ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.