ADVERTISEMENT

ಆತಂಕ ಸೃಷ್ಟಿಸಿದ ‘ಚಿನ್ನದ ಪೊಟ್ಟಣ’

ಪಿಟಿಐ
Published 13 ಜುಲೈ 2019, 19:23 IST
Last Updated 13 ಜುಲೈ 2019, 19:23 IST

ನವದೆಹಲಿ: ಇಲ್ಲಿನ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌–3ರ ಸ್ನಾನಗೃಹದಲ್ಲಿ ಸಿಕ್ಕ ‘ಪೊಟ್ಟಣ’ವೊಂದು ಶನಿವಾರ ಕೆಲಕಾಲ ಆತಂಕದ ವಾತಾವರಣಕ್ಕೆ ಕಾರಣವಾಗಿತ್ತು.

ಕಪ್ಪು ಪಟ್ಟಿಯಲ್ಲಿ ಸುತ್ತಿದ್ದ ಪೊಟ್ಟಣವನ್ನು ಬೆಳಗಿನ ಜಾವ ನೋಡಿದ ವ್ಯಕ್ತಿಯೊಬ್ಬರು, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಬಾಂಬ್‌ ಪತ್ತೆ ಮತ್ತು ನಿಷ್ಕ್ರಿಯ ದಳ ಹಾಗೂ ಶ್ವಾನ ಪಡೆ ಕೂಡಲೇ ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿತು.

ಪೊಟ್ಟಣವನ್ನು ಪರಿಶೀಲಿಸಿದಾಗ ಅದರಲ್ಲಿ ಒಂದು ಕೆ.ಜಿ. ಚಿನ್ನದ ಗಟ್ಟಿ ಇರುವುದು ಗೊತ್ತಾದಾಗ ಎಲ್ಲರೂ ನಿಟ್ಟುಸಿರು ಬಿಟ್ಟರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.