ADVERTISEMENT

ನಾಗ್ಪುರ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಪಿಟಿಐ
Published 22 ಜುಲೈ 2025, 9:55 IST
Last Updated 22 ಜುಲೈ 2025, 9:55 IST
<div class="paragraphs"><p>ಬಾಂಬ್ ಬೆದರಿಕೆ</p></div>

ಬಾಂಬ್ ಬೆದರಿಕೆ

   

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ನಿಲ್ದಾಣದಲ್ಲಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ.

ಶೋಧದ ಸಂದರ್ಭ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ವಿಮಾನ ನಿಲ್ದಾಣದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ADVERTISEMENT

ಮಂಗಳವಾರ ಬೆಳಿಗ್ಗೆ ನಾಗ್ಪುರ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಗ್ಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಇಮೇಲ್ ಬಂದಿತ್ತು. ನಂತರ ಈ ಮಾಹಿತಿಯನ್ನು ನಾಗ್ಪುರ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಕಳುಹಿಸಲಾಗಿತ್ತು ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.

ಸಂಬಂಧಪಟ್ಟ ಸಮಿತಿಯು ಬೆದರಿಕೆ ಇಮೇಲ್ ಅನ್ನು ಮೌಲ್ಯಮಾಪನ ಮಾಡಿತು. ಪೊಲೀಸರು, ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ ಸೇರಿದಂತೆ ವಿವಿಧ ಭದ್ರತಾ ಸಂಸ್ಥೆಗಳು ಅಗತ್ಯವಿರುವ ಎಲ್ಲಾ ಪರಿಶೀಲನೆಗಳನ್ನು ನಡೆಸಿವೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.